ಆಳ್ವಾಸ್ ನಲ್ಲಿ ಯೋಗ ಸಂಗಮ -2025’

ಆಳ್ವಾಸ್ ನಲ್ಲಿ ಯೋಗ ಸಂಗಮ -2025’


ಮೂಡುಬಿದಿರೆ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ಕಾಲೇಜು, ಪುಣೆಯ ರಾಷ್ಟೀಯ ಪ್ರಕೃತಿ ಚಿಕಿತ್ಸಾ ಸಂಸ್ಥೆಯ  ಸಹಯೋಗದಲ್ಲಿ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ ‘ಯೋಗ ಸಂಗಮ -2025’ ಕರ‍್ಯಕ್ರಮ ನಡೆಯಿತು.


ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿವಿಧ ಶಿಕ್ಷಣ ಸಂಸ್ಥೆಗಳ 1500 ವಿದ್ಯಾರ್ಥಿಗಳು ಏಕಕಾಲದಲ್ಲಿ ಸಾಮಾನ್ಯ ಯೋಗ ಪ್ರೋಟೋಕಾಲನ್ನು ಅನುಸರಿಸಿ 45 ನಿಮಿಷಗಳ ಸಾಮೂಹಿಕ ಯೋಗ ಪ್ರದರ್ಶನವನ್ನು ನೀಡಿದರು. ದೇಶದ ಒಂದು ಲಕ್ಷಕ್ಕೂ ಅಧಿಕ ಭಾಗಗಳಲ್ಲಿ ಈ ಯೋಗ ಸಂಗಮ ಕಾಯ೯ಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳಾದ ಅನಂತ ಕೃಷ್ಣ ಸಿ. ವಿ ಮತ್ತು ತ್ರಿಶಾ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.


ಆಳ್ವಾಸ್ ನ್ಯಾಚುರೋಪತಿ ವಿಭಾಗದ ಪ್ರಾಂಶುಪಾಲ ಡಾ. ವನಿತಾ ಶೆಟ್ಟಿ, ಆಡಳಿತಾಧಿಕಾರಿ ಡಾ. ಪ್ರಜ್ಞಾ ಆಳ್ವ, ಆಳ್ವಾಸ್ ಹೋಮಿಯೋಪತಿ  ಕಾಲೇಜಿನ ಪ್ರಾಂಶುಪಾಲ ಡಾ. ರೋಶನ್ ಪಿಂಟೋ, ಆಳ್ವಾಸ್ ಆಯುರ್ವೇದ  ಕಾಲೇಜಿನ ಡಾ.ಸಜಿತ್ ಎಂ, ಆಳ್ವಾಸ್ ಫಾರ್ಮಸಿ  ಕಾಲೇಜಿನ ಪ್ರಾಚರ‍್ಯ   ಡಾ.ಮಂಜುನಾಥ ಸೆಟ್ಟಿ,  ಆಳ್ವಾಸ್ ದೈಹಿಕ ಶಿಕ್ಷಣ ಸ್ನಾತಕೋತ್ತರ  ಕಾಲೇಜಿನ ಡಾ. ಮಧು ಜಿ ಆರ್, ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಪ್ರಶಾಂತ್, ಆಳ್ವಾಸ್ ನ್ಯಾಚುರೋಪತಿ ಕಾಲೇಜಿನ ಉಪ ಪ್ರಾಂಶುಪಾಲೆ ಹಾಗೂ ಯೋಗ ವಿಭಾಗದ ಮುಖ್ಯಸ್ಥ ಡಾ. ವಿದ್ಯಾ ನ್ಯಾಚುರೋಪತಿ ಮತ್ತು ಯೋಗ ವಿಭಾಗದ ಡೀನ್.ಡಾ.ಅರ್ಚನಾ ಇದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article