
ಗಾಂಧಿನಗರ ಶಾಲೆಯಲ್ಲಿ ಪ್ರಾರಂಬೋತ್ಸವ
Monday, June 2, 2025
ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಗಾಂಧಿನಗರ ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾರಂಭೋತ್ಸವ ಕಾರ್ಯಕ್ರಮ ಸೋಮವಾರ ನಡೆಯಿತು.
ಮುಖ್ಯ ಶಿಕ್ಷಕಿ ಕಸ್ತೂರಿ ಎಚ್. ಪ್ರಾಸ್ತಾವಿಕವಾಗಿ ಮಾತನಾಡಿ, ಶಾಲೆಯಲ್ಲಿ ಕಲಿಕೆಗೆ ಪೂರಕವಾದ ವಾತಾವರಣವಿದೆ. ಪ್ರತಿಯೊಂದು ವಿದ್ಯಾರ್ಥಿ ಕಲಿಕೆಯ ಮೇಲೆ ನಿಗಾವಿರಿಸಿ ಪಾಠ ಮಾಡುತ್ತೇವೆ. ಸರ್ಕಾರದ ಬರುವ ಎಲ್ಲ ಸವಲತ್ತುಗಳನ್ನು ಸಕಾಲದಲ್ಲಿ ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತದೆ. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು, ಪೋಷಕರು ತಮ್ಮ ಮಕ್ಕಳು ಸರ್ಕಾರಿ ಶಾಲೆಗೆ ಸೇರಿಸುವಂತಾಗಬೇಕು ಎಂದರು.
ಸರ್ಕಾರದಿಂದ ಕೊಡಮಾಡುವ ಸಮವಸ್ತ್ರ, ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು.
ಪುತ್ತಿಗೆ ಗ್ರಾಪಂ ಮಾಜಿ ಅಧ್ಯಕ್ಷೆ ಮೋಹಿನಿ ಶೆಟ್ಟಿ, ಎಸ್‍ಡಿಎಂಸಿ ಅಧ್ಯಕ್ಷೆ ಸುನೀತಾ ಶೆಟ್ಟಿ, ಉಪಾಧ್ಯಕ್ಷ ಯಶೋಧರ ವಿ.ಬಂಗೇರ, ಶಿಕ್ಷಕಿಯಾರಾದ ಭವ್ಯಾ, ಸುಪ್ರಿತಾ ಹಾಗೂ ಪೋಷಕರು ಉಪಸ್ಥಿತರಿದ್ದರು.