
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯ
Monday, June 9, 2025
ಮೂಡುಬಿದಿರೆ: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯ ಬಗ್ಗೆ ಮೂಡುಬಿದಿರೆ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕರಾದ ನ್ಯಾಯವಾದಿ ಎಂ. ಬಾಹುಬಲಿ ಪ್ರಸಾದ್ ಅವರ ನೇತೃತ್ವದಲ್ಲಿ ಮೂಡುಬಿದಿರೆಯ ಆಳ್ವಾಸ್ ಲಾ ಕಾಲೇಜ್ ಮತ್ತು ಶಿರ್ತಾಡಿ ಇನ್ಸ್ಟ್ ಟ್ಯೂಟ್ ಆಫ್ ಲೀಗಲ್ ಸ್ಟಡೀಸ್ ಕಾಲೇಜಿಗೆ ಭೇಟಿ ನೀಡಿ ಪ್ರಾಂಶುಪಾಲರ ಜೊತೆ ಚರ್ಚಿಸಲಾಯಿತು. ಸಾರ್ವಜನಿಕರ ಹಿತದೃಷ್ಟಿಯಿಂದ ಹೈಕೋರ್ಟ್ ಪೀಠದ ಸ್ತಾಪನೆ ಬಗ್ಗೆ ಕಾನೂನು ವಿದ್ಯಾರ್ಥಿಗಳು ಇ-ಮೇಲ್ ಅಭಿಯಾನ ಮುಖೇನಾ ಸರಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮೂಡುಬಿದಿರೆ ವಕೀಲರ ಸಂಘದ ಅಧ್ಯಕ್ಷ ಹರೀಶ್ ಪಿ. ಮತ್ತು ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ಭಂಡಾರಿ ಹೈಕೋರ್ಟ್ ಪೀಠ ಸ್ಥಾಪನೆ ಹೋರಾಟ ಸಮಿತಿಯ ಮೂಡುಬಿದಿರೆ ಸಮಿತಿಯ ಕಾರ್ಯದರ್ಶಿ ಪ್ರವೀಣ್ ಎಸ್. ಲೋಬೊ ಉಪಸ್ಥಿತರಿದ್ದರು.