
ಡಿಜಿಟಲ್ ಅಪರಾಧ, ಮಾದಕ ವಸ್ತುಗಳ ಬಗ್ಗೆ ಜಾಗೃತಿ ಕಾರ್ಯಕ್ರಮ
Saturday, June 21, 2025
ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನಲ್ಲಿ ನಡೆದ ಪದವಿ ವಿದ್ಯಾರ್ಥಿಗಳ ಓರಿಯಂಟೇಶನ್ ಕಾರ್ಯಕ್ರಮದಲ್ಲಿ ಪೋಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ. ಅವರು ಕಾಲೇಜು ವಿದ್ಯಾರ್ಥಿಗಳು ದುಶ್ಚಟಗಳಿಗೆ ಹೇಗೆ ಬಲಿಯಾಗುತ್ತಾರೆ ಮತ್ತು ಯಾವ ರೀತಿಯ ಮುಂಜಾಗೃತಾ ಕ್ರಮವನ್ನು ಅನುಸರಿಸಬೇಕು ಹಾಗೂ ತಂತ್ರಜ್ಞಾನಗಳ ಬಳಕೆಯಿಂದಾಗುವ ಡಿಜಿಟಲ್ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸಿದರು.
ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ ಮತ್ತು ಮೂಡುಬಿದಿರೆಯ ಇನ್ನರ್ ವೀಲ್ ಸಂಸ್ಥೆಗಳ ಸಹಯೋಗದೊಂದಿಗೆ ಏರ್ಪಡಿಸಲಾಗಿತ್ತು.
ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಅಧ್ಯಕ್ಷತೆ ವಹಿಸಿ, ವಾಣಿಜ್ಯ ವಿಭಾಗದ ಉಪನ್ಯಾಸಕ ಪ್ರಶಾಂತ್ ಕಾರ್ಯಕ್ರಮವನ್ನು ನಿರೂಪಿಸಿದರು.