
ಪಾಡ್ಯಾರು ಶಾಲೆಯಲ್ಲಿ ಯೋಗ ಪ್ರಾತ್ಯಕ್ಷಿಕೆ
Sunday, June 22, 2025
ಮೂಡುಬಿದಿರೆ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಡ್ಯಾರು ಇಲ್ಲಿ ಪತಂಜಲಿ ಯೋಗ ಸಂಸ್ಥೆಯ ಮೂಡುಬಿದಿರೆ ಘಟಕದ ಸವಿತಾ ಮತ್ತು ತಂಡ ವಿದ್ಯಾರ್ಥಿಗಳಿಗೆ ಯೋಗ ಪ್ರಾತ್ಯಕ್ಷಿಕೆಯನ್ನು ನಡೆಸಿ ವಿದ್ಯಾರ್ಥಿಗಳಿಂದ ಯೋಗಭ್ಯಾಸ ನಡೆಸಿದರು.
ಇದೇ ಸಂದರ್ಭದಲ್ಲಿ ಸಂಭ್ರಮ ಶನಿವಾರದ ಕಾರ್ಯಕ್ರಮ ಅಂಗವಾಗಿ ವಿಶೇಷ ಚೇತನ ವ್ಯಕ್ತಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ನಿವೃತ್ತ ಅಂಚೆಪಾಲಕ ಬಾಲಕೃಷ್ಣ ನಾಯಕ್ ಭಾಗವಹಿಸಿ ವಿದ್ಯಾರ್ಥಿಗಳಿಗೆ ತಮ್ಮ ಜೀವನದಲ್ಲಿ ಅನುಭವಿಸಿದ ಸುಖ-ದುಃಖಗಳನ್ನು ಹಂಚಿಕೊಂಡರು ವಿದ್ಯಾರ್ಥಿಗಳು ಎದೆಗುಂದದೆ ಯಾವುದೇ ರೀತಿಯ ದೈಹಿಕ ತೊಂದರೆಗೊಳಗಾದಾಗ ಆತ್ಮಸ್ಥೈರ್ಯದಿಂದ ಬದುಕಬೇಕು ಎಂದು ತಿಳಿಸಿದರು.
ಮುಖ್ಯ ಶಿಕ್ಷಕ ಪ್ರಸನ್ನ ಶೆಣೈ ಸಹ ಶಿಕ್ಷಕ ರಾಬರ್ಟ್ ಡಿಸೋಜಾ ಮತ್ತು ಪ್ರತಿಭಾ ಕಾಯ೯ಕ್ರಮ ನಿರ್ವಹಿಸಿದರು.