ಮೂಡುಬಿದಿರೆ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಉದ್ಘಾಟನೆ: ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಮೂಡುಬಿದಿರೆ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಉದ್ಘಾಟನೆ: ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ


ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ನೂತನವಾಗಿ ಸ್ಥಾಪಿಸಲ್ಪಟ್ಟ ಮೂಡುಬಿದಿರೆ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆಯಿತು. 


ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್, ಗೌರವ ಸಲಹೆಗಾರ ಪುರುಷೋತ್ತಮ ಪೂಜಾರಿ, ಮೂಡಬಿದಿರೆ ಅನೇಕ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕ್ರೀಡಾಪಟುಗಳನ್ನು ಆಳ್ವಾಸ್ ಸಂಸ್ಥೆಯ ಮೂಲಕ ದೇಶಕ್ಕೆ ಕೊಡುಗೆಯಾಗಿ ನೀಡಿದೆ. ದಕ್ಷಿಣ ಕನ್ನಡದ ಜಿಲ್ಲೆಯ 8 ತಾಲೂಕುಗಳಲ್ಲಿ ಮೂಡುಬಿದಿರೆಯನ್ನು ಹೊರತು ಪಡಿಸಿ ಉಳಿದ ಎಲ್ಲಾ ತಾಲೂಕುಗಳಲ್ಲಿ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಕರ‍್ಯನಿರ್ವಹಿಸುತ್ತಿದೆ. ಇಂದು ಮೂಡುಬಿದಿರೆಯಲ್ಲಿ ಅಸೋಸಿಯೇಶನ್ ನಿರ್ಮಾಣವಾಗುವುದರ ಮೂಲಕ ಕಬಡ್ಡಿಗೆ ಹೆಚ್ಚಿನ ಪ್ರೋತ್ಸಾಹ ಸಿಕ್ಕಂತಾಗುತ್ತದೆ ಎಂದರು. 


ಶಾಸಕ ಉಮಾನಾಥ ಎ.ಕೋಟ್ಯಾನ್ ಮಾತನಾಡಿ, ಹಿಂದಿನ ಕಾಲದಲ್ಲಿ ಹೆಚ್ಚಿನ ಖರ್ಚಿಲ್ಲದೆ ಆಡುತ್ತಿದ್ದ ಆಟ ಕಬಡ್ಡಿ. ಇದೊಂದು ಹಳ್ಳಿಯ ಕ್ರೀಡೆ. ಇಂದು ಪ್ರೋಕಬ್ಬಡಿ ಬಂದ ನಂತರ ಇದರ ಖ್ಯಾತಿ ಹಾಗೂ ಆಟಗಾರರಿಗೆ ಮನ್ನಣೆ ಅಂತರಾಷ್ಟ್ರೀಯ ಮಟ್ಟದಲ್ಲಿ ಲಭಿಸುತ್ತಿದೆ. ಮೂಡುಬಿದಿರೆ ತಾಲೂಕಿನ ನೂತನ ಅಧ್ಯಕ್ಷರು, ಯುವಕರು ಹಾಗೂ ಹಿಡಿದ ಕೆಲಸವನ್ನು ಅಷ್ಟೇ ಆಸ್ಥೆಯಿಂದ ಮಾಡುವವರು. ಮುಂದಿನ ದಿನಗಳಲ್ಲಿ ಮೂಡುಬಿದಿರೆ ಜಿಲ್ಲೆ, ರಾಜ್ಯ, ರಾಷ್ಟç ಮಟ್ಟದಲ್ಲಿ ಖ್ಯಾತಿಗೊಳ್ಳಲಿ ಎಂದು ಆಶಿಸಿದರು. 


ತಾಲೂಕು ಕಬಡ್ಡಿ ಅಸೋಸಿಯೇಶನ್ ಪೋಷಕ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮುಖ್ಯ ಅತಿಥಿಯಾಗಿದ್ದರು. 

ಮೂಡಬಿದಿರೆ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಅಧ್ಯಕ್ಷ ವಿವೇಕ್ ಆಳ್ವ, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಕಾರ್ಯದರ್ಶಿ ಚಂದ್ರಶೇಖರ ಕರ್ಣ, ಮಾಹಾಪೋಷಕಡಿಂಜಶ್ರೀಪತಿ ಭಟ್, ತಿಮ್ಮಯ ಶೆಟ್ಟಿ, ಸುನಿಲ್ ಆಳ್ವ, ನಾರಾಯಣ ಪಿ.ಎಂ, ಪ್ರೇಮನಾಥ ಶೆಟ್ಟಿ, ಅಬುಲಾಲ್, ಸುಚರಿತ ಶೆಟ್ಟಿ, ಸುದರ್ಶನ್ ಎಂ. ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬ್ಬಡಿ ಅಸೋಶಿಯೇಶನ್ ಸದಸ್ಯರು ಪಾಲ್ಗೊಂಡಿದ್ದರು. 

ಕಬಡ್ಡಿ ಅಸೋಸಿಯೇಷನ್‌ನ ಕಾರ್ಯಾಧ್ಯಕ್ಷ ಪ್ರಮೋದ್ ಸ್ವಾಗತಿಸಿದರು. ಕಾರ್ಯದರ್ಶಿ ಹಂಸವತಿ ಸಿ.ಎಚ್ ವಂದಿಸಿದರು. ಸದಸ್ಯ ನವೀನ್ ಅಂಬೂರಿ ನಿರೂಪಿಸಿದರು.

ಮೂಡಬಿದಿರೆ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಚೊಚ್ಚಲ ಅಧ್ಯಕ್ಷರಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಆಯ್ಕೆಯಾಗಿದ್ದಾರೆ. ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ನಮ್ಮ ಸಂಸ್ಥೆ ಹಾಗೂ ಸಂಸ್ಥೆಯ ಅಧ್ಯಕ್ಷರು ಕ್ರೀಡೆಗೆ ನೀಡಿದ ಕೊಡುಗೆಯಿಂದ ನನಗೆ ಈ ಗೌರವ ಲಭಿಸಿದೆ. ವಿವಿಧ ಸಂಘ ಸಂಸ್ಥೆಗಳಿಂದ ಉನ್ನತ ಹುದ್ದೆಯ ಅವಕಾಶಗಳು ಬಂದಾಗ ಸದಾ ನಿರಾಕರಿಸುತ್ತಾ ಬಂದ ನಾನು, ಈ ಹುದ್ದೆಯನ್ನು ಪ್ರೀತಿಯಿಂದ ಒಪ್ಪಿಕೊಂಡಿದ್ದೇನೆ. ದಕ್ಷಿಣ ಕನ್ನಡದಲ್ಲಿ ಕಬಡ್ಡಿಗೆ ವಿಶೇಷ ಸ್ಥಾನವಿದೆ. ಈ ಕ್ರೀಡೆಯ ಮೂಲಕ ಯುವ ಕ್ರೀಡಾ ಪ್ರತಿಭೆಗಳನ್ನು ಬೆಳೆಸುವ ಕೆಲಸವನ್ನು ನಾವೆಲ್ಲ ಜೊತೆಯಾಗಿ ಮಾಡಬೇಕು. ಮುಂದಿನ ದಿನಗಳಲ್ಲಿ ಮೂಡುಬಿದಿರೆಯ 30 ಶಾಲೆಗಳ ವಿದ್ಯಾರ್ಥಿಗಳಿಗೆ ಕಬಡ್ಡಿ ಕ್ಷೇತ್ರಕ್ಕೆ ಬೇಕಾದ ಅಗತ್ಯ ತರಬೇತಿ ಹಾಗೂ ಸೌಲಭ್ಯವನ್ನು ನೀಡುವ ಯೋಜನೆಯನ್ನು ಹಮ್ಮಿಕೊಳ್ಳಲಾಗುವುದು ಎಂದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article