ದಕ್ಷಿಣ ಕನ್ನಡ ಮೂಡುಬಿದಿರೆಯ ಜೈನ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ Saturday, June 21, 2025 ಮೂಡುಬಿದಿರೆ: ಮೂಡುಬಿದಿರೆಯ ಜೈನ ಪ್ರೌಢಶಾಲೆಯಲ್ಲಿ ಎನ್.ಸಿ.ಸಿ. ವಾಯುದಳ ವಿಭಾಗದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಡಿಜೆ ಕನ್ನಡ ಮಾಧ್ಯಮ ಶಾಲೆಯ ಯೋಗ ಶಿಕ್ಷಕಿ ಮಂಜುಳಾ ಅವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಎನ್.ಸಿ.ಸಿ. ಅಧಿಕಾರಿ ನಿತೇಶ್ ಕುಮಾರ್ ಅವರು ಉಪಸ್ಥಿತರಿದ್ದರು.