
ಮೂಡುಬಿದಿರೆ ಮೈನ್ ಶಾಲೆಯಲ್ಲಿ ಯೋಗ ದಿನಾಚರಣೆ
Saturday, June 21, 2025
ಮೂಡುಬಿದಿರೆ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮೈನ್ ಶಾಲೆಯಲ್ಲಿ ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್ ಟೌನ್‌ಯಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಕ್ಲಬ್‌ನ ಅಧ್ಯಕ್ಷ ಪೂರ್ಣಚಂದ್ರ ಜೈನ್, ರೋಟರಿ ಅಸಿಸ್ಟೆಂಟ್ ಗವರ್ನರ್ ಉಮೇಶ್ ರಾವ್, ನಿಯೋಜಿತ ಅಧ್ಯಕ್ಷ ಹರೀಶ್ ಎಂ.ಕೆ, ನಿಯೋಜಿತ ಕಾರ್ಯದರ್ಶಿ ಭರತ್ ಶೆಟ್ಟಿ, ಸದಸ್ಯರಾದ ಹರೀಶ್ ಕಾಪಿಕಾಡ್, ರಮೇಶ್ ಕುಮಾರ್, ಶಂಕರ್ ಕೋಟ್ಯಾನ್, ಯೋಗ ಶಿಕ್ಷಕ ಪ್ರಕಾಶ್ ಅಮೀನ್, ಮುಖ್ಯ ಶಿಕ್ಷಕಿ ಶಶಿಕಲಾ, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.