ಮಹಾವೀರ ಕಾಲೇಜಿನಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ

ಮಹಾವೀರ ಕಾಲೇಜಿನಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ


ಮೂಡುಬಿದಿರೆ: ‘ವಿದ್ಯಾರ್ಥಿಗಳು ಪದವಿ ಶಿಕ್ಷಣದಲ್ಲಿ ಅಂಕಗಳನ್ನು ಗಳಿಸುವುದರೊಂದಿಗೆ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಅಗತ್ಯ ವಾಗಿದ್ದರೆ ಮಾತ್ರ ಮೊಬೈಲ್ ಬಳಕೆ ಇರಲಿ.  ಓರಿಯೆಂಟೇಶನ್ ಕಾರ್ಯಕ್ರಮದಲ್ಲಿ ಸಿಗುವ ಮಾಹಿತಿಗಳನ್ನು ದಿನ ನಿತ್ಯ ಚಟುವಟಿಕೆಗಳಲ್ಲಿ ಆಳವಡಿಸಿಕೊಳ್ಳಬೇಕು’ ಎಂದು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾಗರಾಜ್ ಬಿ.ಹೇಳಿದರು. 

ಅವರು ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನ ಐಕ್ಯೂಎಸಿ ಮತ್ತು ಹಳೆವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ಪ್ರಥಮ ಪದವಿ ತರಗತಿಯ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾದ ಓರಿಯೆಂಟೇಶನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ನಡೆಯುವ ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ರಾಧಾಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಹನ ನಾಗರಾಜ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ. ಹರೀಶ್ ಉಪಸ್ಥಿತರಿದ್ದರು. 

ಆಂಗ್ಲ ಭಾಷಾ ಉಪನ್ಯಾಸಕಿ ಪ್ರಜ್ಞಾ ಸ್ವಾಗತಿಸಿದರು. ಗ್ರಂಥಪಾಲಕಿ ಐಸಿರಿ ವಂದಿಸಿ, ವಾಣಿಜ್ಯಶಾಸ್ತೃದ ಉಪನ್ಯಾಸಕಿ ಪದ್ಮಶ್ರೀ ಕಾರ್ಯಕ್ರಮ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article