ಶಿತಾ೯ಡಿ ಮೌಂಟ್ ಕಾಮೆ೯ಲ್ ಶಾಲೆಯಲ್ಲಿ ಪರಿಸರ ದಿನಾಚರಣೆ, ಜಾಥಾ

ಶಿತಾ೯ಡಿ ಮೌಂಟ್ ಕಾಮೆ೯ಲ್ ಶಾಲೆಯಲ್ಲಿ ಪರಿಸರ ದಿನಾಚರಣೆ, ಜಾಥಾ


ಮೂಡುಬಿದಿರೆ: ಶಿರ್ತಾಡಿ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂನ್ 05 ರಂದು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಉಪವಲಯಾರಣ್ಯಧಿಕಾರಿ ಬಸಪ್ಪ ಹಲಗೇರಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಪರಿಸರ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು.


ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಹೆರಾಲ್ಡ್ ಡಿಸಿಲ್ವ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಬಿಂದು ಮ್ಯಾಕ್ಸಿನ್ ಡಿಸೋಜಾ, ಶಿಕ್ಷಕರ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ನಡೆದವು. ತದನಂತರ ಶಾಲೆಯಿಂದ ಶಿರ್ತಾಡಿ ಪಟ್ಟಣದವರೆಗೆ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಪರಿಸರವನ್ನು ಉಳಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳಿಂದ ನಡೆದ ಅಣಕು ಆಡುಗಬ್ಬ ಕಾರ್ಯಕ್ರಮವು ಎಲ್ಲರ ಗಮನ ಸೆಳೆಯಿತು. ವಿದ್ಯಾರ್ಥಿಗಳು ಪ್ಲಾಸ್ಟಿಕ್ಕನ್ನು ಬಳಸಬೇಡಿ ಎಂದು ಘೋಷಣೆ ಕೂಗುತ್ತಾ ಜಾಥಾದಲ್ಲಿ ಮುನ್ನಡೆದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article