
ಉಚಿತ ಯೋಗ ಶಿಬಿರಕ್ಕೆ ಚಾಲನೆ
Wednesday, June 18, 2025
ಮೂಡುಬಿದಿರೆ: ಜೂ. 21ರಂದು ನಡೆಯುವ ವಿಶ್ವ ಯೋಗ ದಿನದ ಪ್ರಯುಕ್ತ ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್ ಟೌನ್ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ (ಮೈನ್) ಇವುಗಳ ಆಶ್ರಯದಲ್ಲಿ ಉಚಿತ ಯೋಗ ತರಬೇತಿ ಶಿಬಿರವು ಮಂಗಳವಾರ ಆರಂಭಗೊಂಡಿತು.
ರೋಟರಿ ಟೆಂಪಲ್ ಟೌನ್ ಅಧ್ಯಕ್ಷ ಪೂರ್ಣಚಂದ್ರ ಜೈನ್ ತರಬೇತಿ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಯೋಗ ತರಬೇತಿದಾರ ಪ್ರಕಾಶ್ ಅಮೀನ್ ಯೋಗದ ಮಾಹಿತಿ ನೀಡಿದರು.
ನಿಯೋಜಿತ ಅಧ್ಯಕ್ಷ ಹರೀಶ್ ಎಂ.ಕೆ. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಯೋಗ ಮಾಡುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ವಿವರಿಸಿದರು.
ಶಾಲೆಯ ಮುಖ್ಯ ಶಿಕ್ಷಕಿ ಶಶಿಕಲಾ ಉಪಸ್ಥಿತರಿದ್ದರು. ನಿಯೋಜಿತ ಕಾಯ೯ದಶಿ೯ ಭರತ್ ಶೆಟ್ಟಿ ಬೆಳುವಾಯಿ ವಂದಿಸಿದರು.