ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಯುವತಿಗೆ ವಂಚಿಸಿ ಆರೋಪ

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಯುವತಿಗೆ ವಂಚಿಸಿ ಆರೋಪ

ಪುತ್ತೂರು: ನಗರದ ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಪ್ರೀತಿಸಿ, ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಆರೋಪ ಪ್ರಕರಣ ದಾಖಲಾಗಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಬ್ಬಳನ್ನು ಗರ್ಭಿಣಿ ಮಾಡಿದ ಪ್ರಕರಣದಲ್ಲಿ ಸ್ಥಳೀಯ ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಪರಾರಿಯಾಗಿದ್ದು ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಇತ್ತೀಚೆಗೆ ಯುವತಿ ಮಗುವಿಗೆ ಜನ್ಮ ನೀಡಿದ್ದು ಅದರ ಬೆನ್ನಲ್ಲೇ ಶ್ರೀಕೃಷ್ಣ ವಿರುದ್ಧ ವಿದ್ಯಾರ್ಥಿನಿ ದೂರು ನೀಡಿದ್ದಾಳೆ. ಪುತ್ತೂರುಬಪ್ಪಳಿಗೆಯಲ್ಲಿ ಘಟನೆ ನಡೆದಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಶುಕ್ರವಾರ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪುತ್ತೂರಿನ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ(21) ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದ್ದು, ಮಂಗಳೂರಿನ ಖಾಸಗಿ ಕಾಲೇಜಿನ ಬಿ.ಎಸ್ಸಿ ಫಾರೆನ್ಸಿಕ್ ಸೈನ್ಸ್ ವಿದ್ಯಾರ್ಥಿನಿ ದೂರು ನೀಡಿದ್ದಾರೆ. ಪುತ್ತೂರಿನಲ್ಲಿ ಹೈಸ್ಕೂಲ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವೇಳೆ ಪ್ರೇಮಾಂಕುರವಾಗಿತ್ತು. ಬಳಿಕ 2024ರ ಅಕ್ಟೋಬರ್ 11ರಂದು ಶ್ರೀಕೃಷ್ಣ ಮನೆಗೆ ಕರೆದು ದೈಹಿಕ ಸಂಪರ್ಕ ಬೆಳೆಸಿದ ಆರೋಪ ಮಾಡಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಮದುವೆಯಾಗುತ್ತೇನೆ ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದಾನೆ. ಅದಾದ ಬಳಿಕ 2025ರ ಜನವರಿ ತಿಂಗಳಿನಲ್ಲಿ ಮತ್ತೆ ಬಲವಂತವಾಗಿ ದೈಹಿಕ ಸಂಪರ್ಕ ಮಾಡಿದ್ದ. ಆ ಬಳಿಕ ಯುವತಿ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿತ್ತು.

ಇದು ಗೊತ್ತಾದ ಬಳಿಕ ಶ್ರೀಕೃಷ್ಣ ಮದುವೆಯಾಗಲು ನಿರಾಕರಿಸಿದ್ದ. ಇದರಿಂದಾಗಿ ಪುತ್ತೂರು ಮಹಿಳಾ ಠಾಣೆಗೆ ಯುವತಿ ದೂರು ನೀಡಿದ್ದಳು. ಸದ್ಯ ಪ್ರಕರಣ ದಾಖಲಿಸಿಕೊಂಡು ಶ್ರೀಕೃಷ್ಣನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಶ್ರೀಕೃಷ್ಣ ಪುತ್ತೂರಿನ ಸ್ಥಳೀಯ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರನಾಗಿದ್ದಾನೆ.

ಪುತ್ತೂರಿನ ನಿವಾಸಿಯಾಗಿರುವ ಯುವತಿ, ತಾನು ಮತ್ತು ಕೃಷ್ಣ ಹಲವು ವರ್ಷಗಳಿಂದ ಸಂಬಂಧದಲ್ಲಿದ್ದೇವೆ ಎಂದು ಹೇಳಿಕೊಂಡಿದ್ದಾಳೆ. ಕೃಷ್ಣ ತನ್ನ ನಂಬಿಕೆಯ ಲಾಭ ಪಡೆದು ತನ್ನ ಮನೆಯಲ್ಲಿ ಹಲವು ಬಾರಿ ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ ಎಂದು ಆಕೆ ಆರೋಪಿಸಿದ್ದಾರೆ. ಗರ್ಭಧಾರಣೆಯ ಬಗ್ಗೆ ತಿಳಿದ ನಂತರ, ಮಹಿಳೆ ತನ್ನ ಪೋಷಕರಿಗೆ ತಿಳಿಸಿದಳು, ನಂತರ ಅವರು ಕೃಷ್ಣನ ಕುಟುಂಬವನ್ನು ಸಂಪರ್ಕಿಸಿದರು. ಕುಟುಂಬವು ಆರಂಭದಲ್ಲಿ ಮದುವೆಗೆ ಒಪ್ಪಿಕೊಂಡರೂ, ಕೃಷ್ಣ ಅಂತಿಮವಾಗಿ ನಿರಾಕರಿಸಿದ್ದ ಎನ್ನಲಾಗಿದೆ.

ಜೂನ್ 24 ರ ರಾತ್ರಿ ದಾಖಲಾದ ದೂರಿನ ಮೇರೆಗೆ ಪುತ್ತೂರು ಪೊಲೀಸರು ಕೃಷ್ಣ ರಾವ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 64 (1) ಮತ್ತು 69 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಸ್ತುತ ಶ್ರೀಕೃಷ್ಣ ತಲೆಮರೆಸಿಕೊಂಡಿದ್ದು, ಪೊಲೀಸರು ಅವರನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article