
ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ
Friday, June 6, 2025
ಪುತ್ತೂರು: ಜೂ.6 ರಂದು ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಪುತ್ತೂರು ಇಲ್ಲಿ ಜಾಗತಿಕ ಮಟ್ಟದಲ್ಲಿ ಆಚರಿಸಲ್ಪಡುವ ವಿಶ್ವ ಪರಿಸರ ದಿನಾಚರಣೆಯನ್ನು ಸಸ್ಯಾಶಾಸ್ತ್ರ, ಪ್ರಾಣಿಶಾಸ್ತ್ರ ವಿಭಾಗ ಹಾಗೂ ಇಕೋ ಕ್ಲಬ್‌ನ ಸಂಯುಕ್ತ ಆಶ್ರಯದಲ್ಲಿ ಮಹತ್ವ ಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಪ್ರಮುಖ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರಿನ ತಾಲೂಕು ಪಂಚಾಯತ್‌ನ ಉಪನಿರ್ದೇಶಕ ವಿಲ್ಫ್ರೆಡ್ ರೊಡ್ರಿಗಸ್ ಅವರು ಭಾಗವಹಿಸಿ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಶಿಶುಗಳ ಡಾಯಪರ್ ಹಾಗೂ ಇತರೆ ಅವ್ಯಯ ಉತ್ಪನ್ನಗಳ ಅಕ್ರಮ ನಾಶದ ಪರಿಣಾಮದ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ವಂ. ಡಾ. ಆಂಟನಿ ಪ್ರಕಾಶ್ ಮೊಂತೇರೊ ಅವರು ವಹಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ಅಗತ್ಯತೆಯನ್ನು ಸೂಚಿಸಿದ ಅವರು ಸಮೃದ್ಧ ಪರಿಸರದತ್ತ ಹೆಜ್ಜೆ ಹಾಕಲು ಸಣ್ಣ ಸಣ್ಣ ಕ್ರಮಗಳನ್ನು ಕೈಗೊಳ್ಳುವುದು ಬಹುಮುಖ್ಯ ಎಂದು ಹೇಳಿದರು.
ಸಸ್ಯಾಶಾಸ್ರ ವಿಭಾಗದ ಉಪನ್ಯಾಸಕಿ ಶಶಿಪ್ರಭಾ ಬಿ., ತಮ್ಮ ಪ್ರಸ್ತಾವಿಕ ನುಡಿಗಳಲ್ಲಿ ವಿದ್ಯಾರ್ಥಿಗಳಲ್ಲಿ ಅನಗತ್ಯ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸುವ ಮೂಲಕ ಬದಲಾವಣೆಯ ಪ್ರಬಲ ಶಕ್ತಿ ರೂಪುಗೊಳ್ಳಬಹುದು ಎಂದು ಪ್ರೇರಣೆಯ ಮಾತುಗಳು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ನಿಗಾ ಅಧಿಕಾರಿ ಡಾ. ನವೀನಚಂದ್ರ ಕುಲಾಲ್, ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ವಿಜ್ಞಾನ ವಿಭಾಗದ ಡೀನ್ ಡಾ. ಮಾಲಿನಿ ಕೆ., ಹಣಕಾಸು ಅಧಿಕಾರಿ ಡಾ. ಎಡ್ವಿನ್ ಡಿಸೋಜ, ಸಸ್ಯಾಶಾಸ್ತ್ರ ಉಪನ್ಯಾಸಕಿ ಸ್ಮಿತಾ ವಿವೇಕ್, ಜೀವಶಾಸ್ತ್ರ ವಿಭಾಗದ ಮುಖ್ಯಸ್ಥೆ ಶ್ರೀರಕ್ಷಾ ಬಿ.ವಿ., ಮತ್ತು ಜೀವಶಾಸ್ತ್ರ ಉಪನ್ಯಾಸಕಿ ಶಿವಾನಿ ಮಲ್ಲ್ಯ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ರಿಯಾ ಡಿ’ಸೋಜಾ ಕಾರ್ಯಕ್ರಮ ನಿರೂಪಿಸಿದರು. ಸಾಮಾಜಿಕ ಕಾರ್ಯ ವಿಭಾಗದ ಸಹ ಪ್ರಾಧ್ಯಾಪಕಿ ಪ್ರತಿಭಾ ವಂದಿಸಿದರು.
ಕಾರ್ಯಕ್ರಮದ ಅಂತ್ಯದಲ್ಲಿ ವಿದ್ಯಾರ್ಥಿಗಳು ಜಾಗೃತಿ ಜಾಥಾದಲ್ಲಿ ಭಾಗವಹಿಸಿದರು. ತದನಂತರ, ಪರಿಸರ ಸಂರಕ್ಷಣೆಯ ಪ್ರತೀಕವಾಗಿ ಕಾಲೇಜು ಪ್ರಾಂಗಣದಲ್ಲಿ ಸಸಿಗಳ ನೆಡುವ ಕಾರ್ಯಾಚರಣೆ ನಡೆಸಲಾಯಿತು.