
ಸಂತ ಫಿಲೋಮಿನಾ ಕಾಲೇಜಿನಲ್ಲಿ ಓಪ್ಟಮ್ ಕಂಪನಿಯ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮ
ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಪ್ಲೇಸ್ಮೆಂಟ್ ಸೆಲ್ ವತಿಯಿಂದ ಕಾಲೇಜಿನ ಸ್ನಾತಕೋತ್ತರ ಸಭಾಭವನದಲ್ಲಿ ಓಪ್ಟಮ್ ಕಂಪನಿಯ ಮೆಡಿಕಲ್ ಕೋಡರ್ ಹುದ್ದೆಗಳಿಗಾಗಿ ಕ್ಯಾಂಪಸ್ ನೇಮಕಾತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
‘2023 ರಿಂದ ಈ ವರ್ಷದ ವರೆಗೆ ಕಾಲೇಜಿನಲ್ಲಿ ಓಪ್ಟಮ್ ಕಂಪನಿಯು ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯನ್ನು ನಡೆಸುತ್ತಾ ಬಂದಿರುತ್ತದೆ. ಪ್ರಸ್ಥುತ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯಬಾರಿಗೆ ಓಪ್ಟಮ್ ಕಂಪನಿಯ ನೇಮಕಾತಿ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಆಯೋಜಿಸಲಾಗಿದೆ. ಕಲವೇ ದಿನಗಳ ಹಿಂದೆ ಅಂತಿಮ ವರ್ಷದ ಪರೀಕ್ಷೆಗಳನ್ನು ಪೂರೈಸಿದ ವಿದ್ಯಾರ್ಥಿಗಳೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿರುವುದು ಸಂತೋಷದ ವಿಚಾರ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಂಪನಿಯ ವಿತಿಯಿಂದ ನಡೆಸುವ ಆರುವಾರಗಳ ಕಡ್ಡಾಯ ತರಬೇತಿ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಆಯೋಜಿಸಲಾಗುವುದು ಎಂದು ಪ್ರಾಂಶುಪಾಲರಾದ ವಂ. ಡಾ. ಆಂಟನಿ ಪ್ರಕಾಶ್ ಮೊಂತೇರೊ ಹೇಳಿದರು.
ನೇಮಕಾತಿ ಪ್ರಕ್ರಿಯೆಯ ನೇತೃತ್ವವಹಿಸಿದ್ದ ಕಾಲೇಜಿನ ಹಿರಿಯ ವಿದ್ಯಾರ್ಥಿ ಪ್ರಸ್ತುತ ಓಪ್ಟಮ್ ಕಂಪನಿಯಲ್ಲಿ ಟ್ಯಾಲೆಂಟ್ ಹಂಟ್‌ನ ಮುಖ್ಯಸ್ಥರಾಗಿರುವ ಕ್ಲೆಮೆಂಟ್ ಜೋಯಲ್ ಸಿಕ್ವೆರಾರವರು ಓಪ್ಟಮ್ ಕಂಪನಿಯ ಕುರಿತು, ಮೆಡಿಕಲ್ ಕೋಡಿಂಗ್‌ಗೆ ಬೇಕಾದ ಅರ್ಹತೆಗಳ ಬಗ್ಗೆ ವಿವರಿಸಿದರು. ಅಭ್ಯರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು ಪದವೀಧರರಿಗೆ ಮೆಡಿಕಲ್ ಕೋಡಿಂಗ್ ಕ್ಷೇತ್ರದಲ್ಲಿರುವ ಉದ್ಯೋಗಾವಕಾಶಗಳ ಬಗ್ಗೆ ವಿವರಣೆ ನೀಡಿದರು.
ಕಾಲೇಜಿನ ಪ್ಲೇಸ್ಮೆಂಟ್ ಆಫೀಸರ್ ಡಾ. ಗೀತಾ ಪೂರ್ಣಿಮಾ ಕೆ. ಸ್ವಾಗತಿಸಿದರು. ಪರೀಕ್ಷಾಂಗ ಉಪಕುಲಸಚಿವರೂ ಪ್ಲೇಸ್ಮೆಂಟ್ ಆಫೀಸರ್ ಆದ ಅಭಿಷೇಕ್ ಸುವರ್ಣ ವಂದಿಸಿದರು. ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪೂಜಾಶ್ರೀ ವಿ. ರೈ ಕಾರ್ಯಕ್ರಮ ನಿರೂಪಿಸಿದರು.
ಕಾಲೇಜಿನ ಪರೀಕ್ಷಾಂಗ ಕುಲಸಚಿವರಾದ ಡಾ. ವಿನಯಚಂದ್ರ, ಹಾಗೂ ಬ್ಯುಸಿನೆಸ್ ಅಡ್ಮಿನಿಸ್ಟ್ರೇಶನ್ ವಿಭಾಗ ಮುಖ್ಯಸ್ಥರಾದ ಡಾ. ರಾಧಾಕೃಷ್ಣ ಗೌಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಂತ ಫಿಲೋಮಿನಾ ಕಾಲೇಜಿನ ಅಂತಿಮ ವರ್ಷದ ಪದವಿಪರೀಕ್ಷೆಗಳನ್ನು ಪೂರೈಸಿದ ವಿದ್ಯಾರ್ಥಿಗಳು ಹಾಗೂ ಪುತ್ತೂರಿನ ಸುತ್ತಮುತ್ತಲಿನ ಹಲವಾರು ಅಭ್ಯರ್ಥಿಗಳು ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು. ಓಪ್ಟಮ್ ಕಂಪನಿಯ ನೇಮಕಾತಿ ತಜ್ಞರಾದ ವಾರೆನ್ ಡಿ’ಕೋಸ್ಟರವರು ನೇಮಕಾತಿ ಪ್ರಕ್ರಿಯೆ ನಡೆಸಿದರು.