
ನಗರಸಭಾ ಸದಸ್ಯ ಹಠಾತ್ ಅಸ್ವಸ್ಥ
Saturday, June 28, 2025
ಪುತ್ತೂರು: ನಗರಸಭೆಯ ಹಿರಿಯ ಸದಸ್ಯರು ಹಾಗೂ ಖ್ಯಾತ ವಾಸ್ತು ಇಂಜಿನಿಯರ್ ಪಿ.ಜಿ. ಜಗನ್ನಿವಾಸ್ ರಾವ್ ಅವರು ಶುಕ್ರವಾರ ರಾತ್ರಿ ಹಠಾತ್ ಅನಾರೋಗ್ಯಕ್ಕೆ ತುತ್ತಾಗಿ, ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶುಕ್ರವಾರ ರಾತ್ರಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ, ಕುಟುಂಬಸ್ಥರು ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ತುರ್ತು ಚಿಕಿತ್ಸೆ ಕೊಡಿಸಿದ್ದಾರೆ ಎಂದು ಅವರ ಕುಟುಂಬದ ಆಪ್ತ ಮೂಲಗಳು ಮಾಹಿತಿ ನೀಡಿವೆ.
ಪ್ರಸ್ತುತ ಜಗನ್ನಿವಾಸ್ ರಾವ್ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಯಾವುದೇ ಆತಂಕಕ್ಕೆ ಕಾರಣವಿಲ್ಲ ಎಂದು ಆಸ್ಪತ್ರೆಯ ವೈದ್ಯಕೀಯ ಮೂಲಗಳು ಖಚಿತಪಡಿಸಿವೆ.