
ಕುಕ್ಕೆ: ಬೆಳ್ಳಿರಥ ನಿರ್ಮಾಣಕ್ಕೆ ಡಾ. ರೇಣುಕಾ ಪ್ರಸಾದ್ ಕುಟುಂಬದವರಿಂದ ವೀಳ್ಯ ನೀಡಿಕೆ
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಡಾ. ಕೆ.ವಿ ರೇಣುಕಾಪ್ರಸಾದ್ ಮತ್ತು ಕುಟುಂಬದವರು ಬೆಳ್ಳಿ ರಥ ನೀಡಲಿದ್ದು, ಅದರ ಪೂರ್ವಭಾವಿಯಾಗಿ ರಥ ನಿರ್ಮಾಣಕ್ಕೆ ವೀಳ್ಯ ನೀಡುವ ಕಾರ್ಯಕ್ರಮ ಜೂ.14 ರಂದು ನಡೆಯಿತು.
ಇಂದು ದೇವಾಲಯದಲ್ಲಿ ಶಾಸ್ತ್ರೋಕ್ತ ವಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸಿ ಪ್ರಾರ್ಥನೆ ಮಾಡಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯರಿದ್ದು, ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಮತ್ತಿತರರು ಅನುಮತಿ ಪತ್ರವನ್ನು ಹಸ್ತಾಂತರಿಸಿದರು. ನಂತರ ವೀಳ್ಯ ನೀಡಿಕೆ ನಡೆಯಿತು.
ಭರತ್ ಮುಂಡೋಡಿ, ನಿತ್ಯಾನಂದ ಮುಂಡೋಡಿ, ಮೋಹನ್ ರಾಮ್ ಸುಳ್ಳಿ, ರಥಶಿಲ್ಪಿ ರಾಜಗೋಪಾಲ್ ಆಚಾರ್, ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಮಾಸ್ಟರ್ ಪ್ಲಾನ್ ಸದಸ್ಯರು, ಸ್ಥಳೀಯ ಮುಖಂಡರು ಭಾಗವಹಿಸಿದ್ದಾರೆ. ಇನ್ನೂ ರಥ ನಿರ್ಮಾಣಕ್ಕೆ ಸಾಂಕೇತಿಕವಾಗಿ ಬೆಳ್ಳಿ ಮತ್ತು ಮರ ಹಸ್ತಾಂತರ ನಡೆಯಲಿದೆ.
ಡಾ. ಜ್ಯೋತಿ ಆರ್. ಪ್ರಸಾದ್, ಮೌರ್ಯ, ಡಾ. ಅಭೀಜ್ಞಾ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಡಾ. ರಘು, ಅಶೋಕ್ ನೆಕ್ರಾಜೆ, ಸೌಮ್ಯ ಭರತ್, ಪ್ರವೀಣ ರೈ, ಮಾಸ್ಟರ್ ಪ್ಲಾನ್ ಸಮಿತಿಯ ಸದಸ್ಯರಾದ ಲೋಲಾಕ್ಷ ಕೈಕಂಬ, ಸತೀಶ್ ಕೂಜುಗೋಡು, ಪವನ್ ಎಂ.ಡಿ, ಅಚ್ಚುತ ಆಲ್ಕಭೆ, ಮಾಜಿ ಸ್ಪೀಕರ್ ಕೆ.ಜಿ ಭೋಪಯ್ಯ, ವಿಧಾನ ಪರಿಷತ್ ಸದಸ್ಯ ಜಿ. ಕೃಷ್ಣಪ್ಪ, ಪಿ.ಜಿ. ಜಯರಾಮ ಗೌಡ, ಎಸ್‌ಎನ್ ಮನ್ಮಥ, ವೆಂಕಟ್ ದಂಬೆಕೋಡಿ, ಎನ್.ಎ ರಾಮಚಂದ್ರ, ಚಂದ್ಯಾ ಕೊಲ್ಚಾರು, ಹರೀಶ್ ಕಂಜಿಪಿಲಿ, ಭರತ್ ನೆಕ್ರಾಜೆ, ಸಂತೋಷ್ ಜಾಕೆ, ದಯಾನಂದ ಕುರುಂಜಿ, ಕೃಷ್ಣಮೂರ್ತಿ ಭಟ್ ಮತ್ತಿತರರು ಉಪಸ್ಥಿತರಿದ್ದರು.