
ಕುಕ್ಕೆ: ಶ್ರೀ ಕ್ಷೇತ್ರಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ
Monday, June 30, 2025
ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸೋಮವಾರ ಭೇಟಿ ನೀಡಿದರು.
ಶ್ರೀ ದೇವಳಕ್ಕೆ ಆಗಮಿಸಿದ ಅವರನ್ನು ದೇವಳದ ಆನೆ ಯಶಸ್ವಿ ತನ್ನ ಸೊಂಡಿಲಿನಿಂದ ಆಶೀರ್ವದಿಸಿತು. ಬಳಿಕ ಸಚಿವರನ್ನು ಮಂಗಳವಾದಯ ಮತ್ತು ಪೂರ್ಣಕುಂಭದೊಂದಿಗೆ ಶ್ರೀ ದೇವಳಕ್ಕೆ ಕರೆದೊಯ್ಯಲಾಯಿತು. ನಂತರ ಶ್ರೀ ದೇವರ ದರುಶನ ಮಾಡಿದ ಸಚಿವರಿಗೆ ಅರ್ಚಕ ವೇದಮೂರ್ತಿ ಸತ್ಯನಾರಾಯಣ ನೂರಿತ್ತಾಯರು ಶಾಲು ಹೊದಿಸಿ ಮಹಾಪ್ರಸಾದ ನೀಡಿ ಹರಸಿದರು. ತದನಂತರ ಹೊಸಳಿಗಮ್ಮನ ದರುಶನ ಮಾಡಿ ಪ್ರಸಾದ ಸ್ವೀಕರಿಸಿದರು.
ಮಾಜಿ ಸಚಿವ ರಮಾನಾಥ ರೈ, ಶಾಸಕಿ ಭಾಗೀರಥಿ ಮುರುಳ್ಯ, ರಾಜ್ಯ ಮುಜರಾಯಿ ಆಯುಕ್ತ ಡಾ. ಎಂ.ವಿ. ವೆಂಕಟೇಶ್, ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ, ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್. ಇಂಜಾಡಿ, ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಎಇಒ ಯೇಸುರಾಜು, ಗ್ರಾ.ಪಂ. ಅಧ್ಯಕ್ಷೆ ಸುಜಾತಾ ಕಲ್ಲಾಜೆ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ರವಿಶಂಕರ ಶೆಟ್ಟಿ, ಮಲ್ಲಿಕಾ ಪಕ್ಕಳ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಡಾ. ರಘು, ಮಹೇಶ್ ಕುಮಾರ್ ಕೆ.ಎಸ್ ಕರಿಕ್ಕಳ, ಅಶೋಕ್ ನೆಕ್ರಾಜೆ, ಸೌಮ್ಯಾ ಭರತ್, ಲೀಲಾ ಮನಮೋಹನ್, ಪ್ರವೀಣ ರೈ ಮರುವಂಜ, ಅಜಿತ್ ಕುಮಾರ್, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಲೋಲಾಕ್ಷ ಕೈಕಂಬ, ಸತೀಶ್ ಕೂಜುಗೋಡು, ಪವನ್ ಎಂ.ಡಿ, ಅಚ್ಚುತ್ತ ಗೌಡ ಬಳ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಪ್ರಮುಖರಾದ ಎಂ. ಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.