
ಫಲಕ ಅನಾವರಣ ಮೂಲಕ ಆಶ್ಲೇಷ ಬಲಿ ಪೂಜಾ ಮಂದಿರ ಕಾಮಗಾರಿಗೆ ಚಾಲನೆ
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಾಜಿ ಸಚಿವ ಮಾಲೂರು ಎಸ್. ಎನ್.ಕೃಷ್ಣಯ್ಯ ಶೆಟ್ಟಿ ಹಾಗೂ ಬೆಂಗಳೂರಿನ ಉದ್ಯಮಿ ಜೈಪುನೀತ್ ಮತ್ತು ಕುಟುಂಬಸ್ಥರು ಸೇವಾರೂಪದಲ್ಲಿ ನಿರ್ಮಿಸಿ ಕೊಡುವ ಬೃಹತ್ ಆಶ್ಲೇಷ ಬಲಿ ಪೂಜಾ ಮಂದಿರ ನಿರ್ಮಾಣಕ್ಕೆ ಫಲಕ ಅನಾವರಣದ ಮೂಲಕ ಚಾಲನೆ ನೀಡಿದರು.
ಈ ಮೊದಲು ದಾನಿ ಉದ್ಯಮಿ ಜೈಪುನೀತ್ ಅವರನ್ನು ಸಚಿವರು ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು. ಬಳಿಕ ಪೂಜಾ ಮಂದಿರ ನಿರ್ಮಾಣಕ್ಕೆ ಸೇವಾಕರ್ತರಿಗೆ ಆದೇಶ ಪತ್ರ ಹಸ್ತಾಂತರಿಸಿದರು. ಬಳಿಕ ಮಂದಿರ ನಿರ್ಮಾಣಗೊಳ್ಳಲಿರುವ ತುಳಸಿ ತೋಟಕ್ಕೆ ತೆರಳಿ ಸ್ಥಳ ಪರಿಶೀಲನೆ ಮಾಡಿದರು.
ಮಾಜಿ ಸಚಿವ ಬಿ.ರಮಾನಾಥ ರೈ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರಾಜ್ಯ ಮುಜರಾಯಿ ಆಯುಕ್ತ ಡಾ.ಎಂ.ವಿ.ವೆಂಕಟೇಶ್, ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ, ಕರ್ನಾಟಕ ರಾಜ್ಯ ಗೇರು ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ, ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್. ಇಂಜಾಡಿ, ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಗ್ರಾ.ಪಂ. ಅಧ್ಯಕ್ಷೆ ಸುಜಾತಾ ಕಲ್ಲಾಜೆ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ರವಿಶಂಕರ ಶೆಟ್ಟಿ, ಮಲ್ಲಿಕಾ ಪಕ್ಕಳ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಪ್ರಮುಖರಾದ ಎಂ. ಕೃಷ್ಣಪ್ಪ, ನಿತ್ಯಾನಂದ ಮುಂಡೋಡಿ, ಎಂ.ವೆಂಕಪ್ಪ ಗೌಡ, ಪಿ.ಸಿ. ಜಯರಾಂ, ಅಭಿಲಾಷ್ ಪಿ.ಕೆ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಡಾ. ರಘು, ಮಹೇಶ್ ಕುಮಾರ್ ಕೆ.ಎಸ್ ಕರಿಕ್ಕಳ, ಅಶೋಕ್ ನೆಕ್ರಾಜೆ, ಸೌಮ್ಯಾ ಭರತ್, ಲೀಲಾ ಮನಮೋಹನ್, ಪ್ರವೀಣ ರೈ ಮರುವಂಜ, ಅಜಿತ್ ಕುಮಾರ್, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಲೋಲಾಕ್ಷ ಕೈಕಂಬ, ಸತೀಶ್ ಕೂಜುಗೋಡು, ಪವನ್ ಎಂ.ಡಿ, ಅಚ್ಚುತ್ತ ಗೌಡ ಬಳ್ಪ, ಸೇರಿದಂತೆ ಇತರರು ಉಪಸ್ಥಿತರಿದ್ದರು.