ಅರೆಭಾಷೆ ಅಕಾಡೆಮಿಯ ವತಿಯಿಂದ ಕಥೆ ಬರೆಯುವ ಕಾರ್ಯಾಗಾರ

ಅರೆಭಾಷೆ ಅಕಾಡೆಮಿಯ ವತಿಯಿಂದ ಕಥೆ ಬರೆಯುವ ಕಾರ್ಯಾಗಾರ


ಸುಳ್ಯ: ಮಕ್ಕಳಲ್ಲಿ ಕಥೆ ಬರೆಯುವ ಹವ್ಯಾಸವನ್ನು ಬೆಳೆಸಿದರೆ ಮುಂದೆ ಉತ್ತಮ ಕಥೆಗಾರರಾಗಿ ಭಾಷೆ, ಸಾಹಿತ್ಯಕ್ಕೆ ದೊಡ್ಡ ಆಸ್ತಿ ಆಗಲಿದ್ದಾರೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಹೇಳಿದರು.

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ಕನ್ನಡ ಭವನದಲ್ಲಿ ಅರೆಭಾಷೆ ಕಥೆ ಬರೆಯುವ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು

ಅಕಾಡೆಮಿಯ ಸದಸ್ಯ ಹಾಗು ಕಾರ್ಯಕ್ರಮದ ಸಂಚಾಲಕ ಲೋಕೇಶ್ ಊರುಬೈಲು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಅಕಾಡೆಮಿ ಸದ್ಯಸರಾದ ತೇಜಕುಮಾರ್ ಕುಡೆಕಲ್ಲು ಅರಂತೋಡು ಶಾಲೆಯ ಶಿಕ್ಷಕರಾದ ಕಿಶೋರ್ ಕುಮಾರ್ ಕಿರ್ಲಾಯ ಶುಭ ಹಾರೈಸಿದರು. 

ಸಂಪನ್ಮೂಲ ವ್ಯಕ್ತಿಗಳಾದ ಡಾ.ಪುನೀತ್ ರಾಘವೇಂದ್ರ ಕುಂಟುಕಾಡು ಮತ್ತು ಪ್ರಸನ್ನ ಐವರ್ನಾಡು, ಮತ್ತು ಅಕಾಡೆಮಿ ಸದಸ್ಯರಾದ ಗೋಪಾಲ ಪೆರಾಜೆ ಉಪಸ್ಥಿತರಿದ್ದರು. 

ದೃತಿ ದೀಟಿಗೆ ಸ್ವಾಗತಿಸಿ, ಖಷೀರ ಸಿ.ಯು ವಂದಿಸಿದರು. ಅಕಾಡೆಮಿ ಸದಸ್ಯ ವಿನೋದ್ ಮೂಡಗದ್ದೆ ಕಾರ್ಯಕ್ರಮ ನಿರೂಪಿಸಿದರು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಅಕಾಡೆಮಿ ಸದಸ್ಯರಾದ ಗೋಪಾಲ್ ಪೆರಾಜೆ, ಜ್ಞಾನೇಶ್ ನಿಡ್ಯಮಲೆ, ಚಂದ್ರಶೇಖರ ಪೇರಾಲ್, ಪತ್ರಕರ್ತ ಹರೀಶ್ ಬಂಟ್ವಾಳ್ ಹಾಗೂ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.

ಕಾರ್ಯಾಗಾರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಬಳಿಕ ಸ್ವಂತ ಕಥಾ ರಚನೆ ಮಾಡಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article