
ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ: ನಗರ ಪಂಚಾಯತ್, ವಿವಿಧ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನಾ ಸಭೆ
ಸುಳ್ಯ: ರಾಜ್ಯದ ಕಾಂಗ್ರೆಸ್ ಸರಕಾರ ಜನ ವಿರೋಧಿ ನೀತಿಯನ್ನು ಅನುಸರಿಸುತಿದೆ ಎಂದು ಆರೋಪಿಸಿ ಬಿಜೆಪಿ ಮಂಡಲ ಸಮಿತಿ ವತಿಯಿಂದ ಸುಳ್ಯ ನಗರ ಪಂಚಾಯತ್ ಹಾಗೂ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ಗಳ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ವಿವಿಧ ಕಡೆ ನಡೆದ ಪ್ರತಿಭಟನೆಯಲ್ಲಿ ಪ್ರಮುಖ ಬಿಜೆಪಿ ನೇತಾರರು ಭಾಗವಹಿಸಿದ್ದರು. ಸುಳ್ಯ ನಗರ ಪಂಚಾಯತ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯನ್ನು ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ ಉದ್ಘಾಟಿಸಿದರು.
ನ.ಪಂ. ಉಪಾಧ್ಯಕ್ಷ ಬುದ್ಧ ನಾಯ್ಕ್, ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಬಿಜೆಪಿ ನಗರ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಕುಸುಮಾಧರ ಎ.ಟಿ. ಮಾತನಾಡಿದರು.
ಬಿಜೆಪಿ ನಗರ ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಎಸ್.ಎಂ. ನಾರಾಯಣ ಶಾಂತಿನಗರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಬೂಡು ರಾಧಾಕೃಷ್ಣ ರೈ ವಂದಿಸಿದರು.
ಅಜ್ಜಾವರ ಪಂಚಾಯತ್ ಮುಂಭಾಗ ನಡೆದ ಪ್ರತಿಭಟನೆಯನ್ನು ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಉದ್ಘಾಟಿಸಿದರು.
ಬಿಜೆಪಿ ಮಂಡಲ ಸಮಿತಿ ಕೋಶಾಧಿಕಾರಿ ಸುಬೋದ್ ಶೆಟ್ಟಿ ಮೇನಾಲ, ತಾ.ಪಂ ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ, ಸುಳ್ಯ ಸಿಎ ಬ್ಯಾಂಕ್ ಅಧ್ಯಕ್ಷ ವಿಕ್ರಂ ಎವಿ ಅಡ್ಪಂಗಾಯ, ಪ್ರಮುಖರಾದ ರಾಜೇಶ್ ಶೆಟ್ಟಿ ಮೇನಾಲ, ಜಿಜಿ ನಾಯಕ್, ಮನ್ಮಥ ಎಎಸ್, ಸತ್ಯವತಿ ಬಸವನಪಾದೆ, ಜಯಂತಿ ಜನಾರ್ಧನ, ಮತ್ತಿತರರು ಉಪಸ್ಥಿತರಿದ್ದರು.