
ಕೆಂಪೇಗೌಡರ ನಾಯಕತ್ವ ಎಲ್ಲರಿಗೂ ಆದರ್ಶ: ಶಾಸಕಿ ಭಾಗೀರಥಿ ಮುರುಳ್ಯ
ಸುಳ್ಯ: ಕೆಂಪೇಗೌಡರ ಆದರ್ಶ ಹಾಗೂ ನಾಯಕತ್ವ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಬೆಂಗಳೂರನ್ನು ನಿರ್ಮಿಸಿದ ಕೆಂಪೇ ಗೌಡರ ನಾಯಕತ್ವ ಮತ್ತು ಆಡಳಿತ ಎಲ್ಲರಿಗೂ ಮಾದರಿ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಅವರು ಇಂದು ಸುಳ್ಯ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಾಡಪ್ರಭು ಕೆಂಪೇಗೌಡರ ೫೧೬ನೇ ಜಯಂತಿ ಕಾರ್ಯಕ್ರಮ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು.
ನಾಡಪ್ರಭು ಕೆಂಪೇಗೌಡರ ಬಗ್ಗೆ ಶಿಕ್ಷಕಿ ಚಂದ್ರಮತಿ ಕೆ. ಮಾತನಾಡಿದರು.
ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಎ. ನೀರಬಿದರೆ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ.ಎಂ. ಮುಸ್ತಫಾ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ, ಕರ್ನಾಟಕ ಸಹಕಾರ ಪತ್ತಿನ ಸಂಘಗಳ ಮಹಾ ಮಂಡಳ ಬೆಂಗಳೂರು ಇದರ ನಿರ್ದೇಶಕ ಚಂದ್ರ ಕೋಲ್ಚಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಕೃಷ್ಣಪ್ಪ, ನಗರ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಕಿಶೋರಿ ಶೇಟ್, ಸದಸ್ಯರಾದ ಧೀರಾ ಕ್ರಾಸ್ತಾ, ಶಿಲ್ಪಾ ಸುದೇವ್ ಮತ್ತಿತರರು ಉಪಸ್ಥಿತರಿದ್ದರು.
ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ವಂದಿಸಿದರು. ಮಮತ ಎಸ್.ಕೆ. ಕಾರ್ಯಕ್ರಮ ನಿರೂಪಿಸಿದರು.
ನಾಡಪ್ರಭು ಕೆಂಪೇ ಗೌಡರ ಭಾವಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.