
ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ನೂತನ ಕಚೇರಿಯ ಉದ್ಘಾಟನೆ
ಸುಳ್ಯ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸುಳ್ಯ ತಾಲೂಕು, ಪಂಚಾಯತ್ ರಾಜ್ ಇಂಜಿನಿಯರಿಂಗ್, ಉಪ ವಿಭಾಗ, ಸುಳ್ಯ ಇದರ ನೂತನ ಕಚೇರಿ ಕಟ್ಟಡದ ಉದ್ಘಾಟನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೆರವೇರಿಸಿದರು.
ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿದ್ದರು.
ನ.ಪಂ. ಅಧ್ಯಕ್ಷೆ ಶಶಿಕಲಾ ಎ., ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಹರೀಶ್ ಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಪುತ್ತೂರು ಸಹಾಯಕ ಕಮೀಷನರ್ ಸ್ಟೆಲ್ಲಾ ವರ್ಗೀಸ್, ತಹಶೀಲ್ದಾರ್ ಮಂಜುಳಾ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಚೈತ್ರ ಎಸ್.ಆರ್, ಸಹಾಯಕ ಇಂಜಿನಿಯರ್ ಮಣಿಕಂಠನ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಜನಾರ್ಧನ್, ಮುಖಂಡರಾದ ಧನಂಜಯ ಅಡ್ಪಂಗಾಯ, ಟಿ.ಎಂ. ಶಹೀದ್ ತೆಕ್ಕಿಲ್, ಜಿ.ಕೃಷ್ಣಪ್ಪ, ಪಿ.ಸಿ. ಜಯರಾಮ, ರಾಧಾಕೃಷ್ಣ ಬೊಳ್ಳೂರು, ನಿತ್ಯಾನಂದ ಮುಂಡೋಡಿ, ಪಿ.ಎಸ್. ಗಂಗಾಧರ, ಗೀತಾ ಕೋಲ್ಚಾರ್, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಸೂಡ ಅಧ್ಯಕ್ಷ ಕೆ.ಎಂ. ಮುಸ್ತಫ, ಸರಸ್ವತಿ ಕಾಮತ್, ಬೆಟ್ಟ ಜಯರಾಮ ಭಟ್, ಇಕ್ಬಾಲ್ ಎಲಿಮಲೆ, ಸೋಮಶೇಖರ ಕೊಯಿಂಗಾಜೆ, ಜಿ.ಕೆ. ಹಮೀದ್, ಕೆ. ಗೋಕುಲ್‌ದಾಸ್, ಮಹಮ್ಮದ್ ಕುಂಞಿ ಗೂನಡ್ಕ, ಧರ್ಮಪಾಲ ಕೊಯಿಂಗಾಜೆ, ರಾಧಾಕೃಷ್ಣ ಪರಿವಾರಕಾನ, ರಹೀಂ ಬೀಜದಕಟ್ಟೆ, ರಾಜು ಪಂಡಿತ್, ಭವಾನಿ ಶಂಕರ್ ಕಲ್ಮಡ್ಕ, ಶಾಫಿ ಕುತ್ತಮೊಟ್ಟೆ, ಚೇತನ್ ಕಜೆಗದ್ದೆ, ರಂಜಿತ್ ರೈ ಮೇನಾಲ, ಎಸ್.ಕೆ. ಹನೀಫ, ದಿನೇಶ್ ಅಂಬೆಕಲ್ಲು, ಫವಾಝ್ ಕನಕಮಜಲು, ಶಹೀದ್ ಪಾರೆ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದಲ್ಲಿ ಮತ್ತು ಗ್ರಾಮೀಣ ಕುಡಿಯುವ ನೀರು ವಿಭಾಗಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಅಡಬೇಕು ಎಂದು ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಚಿವರು ಅಹವಾಲು ಸ್ವೀಕರಿಸಿದರು.