
ಸುಳ್ಯ ತಾಲೂಕಿನ ಎಲ್ಲಾ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರುಗಳ ಸಭೆ
ಸುಳ್ಯ: ಕುಕ್ಕೆ ಸುಬ್ರಹ್ಮಣ್ಯಕ್ಕೆ ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ಜೂ.30 ಆಗಮಿಸುವ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನ ದೇವಾಲಯಗಳ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸುವ ಸಲುವಾಗಿ ಚರ್ಚಿಸಲು ಸುಳ್ಯ ತಾಲೂಕಿನ ಎಲ್ಲಾ ದೇವಾಲಯಗಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರುಗಳ ಸಭೆ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ನಡೆಯಿತು. ಕಾಯರ್ತೋಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ. ವೆಂಕಪ್ಪ ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಕೊಳಲು ಮೂಲೆ, ಮಂಡೆಕೋಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸದಾನಂದ ಮಾವಾಜಿ, ಅಡ್ಕಾರ್ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರಿಪ್ರಕಾಶ್ ಅಡ್ಕಾರ್, ಉಬರಡ್ಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜತ್ತಪ್ಪ ಗೌಡ, ಮರ್ಕಂಜ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜಗನ್ನಾಥ ಕಾಯರ, ವಳಲಂಬೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಆಲೆಟ್ಟಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ತೀರ್ಥರಾಮ ಕುಂಚಡ್ಕ, ನಾಗಪಟ್ಟಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ದಿನೇಶ್ ಕೋಲ್ಚಾರ್, ಪೋದೆ ಅವಳಿ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜಗದೀಶ್ ಹುದೇರಿ, ಭುವನೇಶ್ವರ, ಪೈಂದೋಡಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕುದ್ವ, ಉಬರಡ್ಕ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪಿ.ಎಸ್. ಗಂಗಾಧರ್ ವೆಂಕಟರಮಣ ಸೊಸೈಟಿಯ ಮಾಜಿ ಅಧ್ಯಕ್ಷ ಪಿ.ಸಿ. ಜಯರಾಂ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಧ್ಯಕ್ಷ ಹರೀಶ್ ಇಂಜಾಡಿಯವರನ್ನು ಕಾಯರ್ತೋಡಿ ದೇವಸ್ಥಾನದ ಅಧ್ಯಕ್ಷರಾದ ಎಂ.ವೆಂಕಪ್ಪ ಗೌಡರು ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಲಾಯಿತು.