ಆರಂತೋಡು ಕಾಲೇಜಿನಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ ಸ್ಥಾಪನೆ

ಆರಂತೋಡು ಕಾಲೇಜಿನಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ ಸ್ಥಾಪನೆ


ಸುಳ್ಯ: ಕರ್ನಾಟಕ ಅರೆಭಾಣೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಮತ್ತು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಆಶ್ರಯದಲ್ಲಿ ಸಂಘದ ಉದ್ಘಾಟನೆ ಮತ್ತು ಕಾಲೇಜು ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರೆಭಾಷೆ ಅಕಾಡಮಿ ಅಧ್ಯಕ್ಷ ಸದಾನಂದ ಮಾವಜಿ ವಹಿಸಿ ಮಾತನಾಡಿ, ಅರೆಭಾಷೆ ತ್ರೈಮಾಸಿಕ ಪತ್ರಿಕೆ ಹಿಂಗಾರದಲ್ಲಿ ವಿದ್ಯಾರ್ಥಿ ಸಾಹಿತ್ಯಕ್ಕಾಗಿಯೇ ಪುಟಗಳನ್ನು ಮೀಸಲಿಟ್ಟಿದ್ದೇವೆ ವಿದ್ಯಾರ್ಥಿಗಳ ಬರವಣಿಗೆಯಲ್ಲಿ ತೊಡಗಿಕೊಳ್ಳಬೇಕು ಅಲ್ಲದೇ ಮುಂದಿನ ಪೀಳಿಗೆಗೆ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಉಳಿಸಿ ಬೆಳೆಸುವ ಮಹತ್ತರ ಕಾರ್ಯ ವಿದ್ಯಾರ್ಥಿಗಳ ಮೇಲಿದೆ ಎಂದರು.

ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದ ನಿವೃತ್ತ ಪ್ರಾಂಶುಪಾಲ ಕೆ.ಆರ್. ಗಂಗಾಧರ ಅರೆಭಾಷೆ ಹೃದಯದ ಭಾಷೆ, ಈ ಭಾಷೆಯನ್ನು ಮಾತನಾಡಲು ಯಾವುದೇ ಮುಜುಗರ ಬೇಡ ಎಂದು ಹೇಳಿದರು. ಸಾಹಿತಿ ಹಾಗೂ ಕಲಾವಿದರಾದ ಭವಾನಿಶಂಕರ ಅಡ್ತಲೆ ಉಪನ್ಯಾಸ ನೀಡಿದರು.

ಮುಖ್ಯ ಅಥಿತಿಯಾಗಿ ಕಾಲೇಜಿನ ಪ್ರಾಂಶುಪಾಲರಾದ ಎಸ್. ರಮೇಶ್, ಕಾರ್ಯಕ್ರಮ ಸಂಯೋಜಕರಾದ ಕಿಶೋರ್ ಕುಮಾರ್ ಕಿರ್ಲಾಯ ಶುಭ ಹಾರೈಸಿದರು. ಅರೆಭಾಷೆ ಅಕಾಡಮಿಯ ಸದಸ್ಯರಾದ ಚಂದ್ರಶೇಖರ ಪೇರಾಲ್, ತೇಜಕುಮಾರ್ ಕುಡೇಕಲ್, ಡಾ. ಜ್ಞಾನೇಶ್ ಎನ್.ಎ. ಉಪಸ್ಥಿತರಿದ್ದರು.

ಅಕಾಡಮಿಯ ಸದಸ್ಯ ಸಂಚಾಲಕ ಲೋಕೇಶ್ ಊರುಬೈಲ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಘದ ಉಪಾಧ್ಯಕ್ಷ ಪವನ್ ಎಂ.ಎ. ಸ್ವಾಗತಿಸಿ, ನಿರ್ದೇಶಕರಾದ ಶ್ರವಣ್ ಪಿ.ಡಿ ವಂದಿಸಿದರು. ಸಂಫದ ನೂತನ ಅಧ್ಯಕ್ಷೆ ಗ್ರೀಷ್ಮ ಕೆ.ಎಸ್. ಕಾರ್ಯಕ್ರಮ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article