
ಸ್ಪಂದನಾ ಸೇವಾ ಸಂಸ್ಥೆಯಿಂದ ‘ಉಚಿತ ನೋಟ್ ಪುಸ್ತಕ ವಿತರಣೆ’-ಕಿರಣ್ ಮಂಜನಬೈಲುಗೆ ‘ಯಶೋ ಮಾಧ್ಯಮ-2025’ ಪ್ರಶಸ್ತಿ ಪ್ರದಾನ
Sunday, June 15, 2025
ಉಡುಪಿ: ಇಲ್ಲಿನ ಕಲ್ಯಾಣಪುರದ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸ್ಪಂದನಾ ಸೇವಾ ಸಂಸ್ಥೆಯಿಂದ ಉಚಿತ ನೋಟ್ ಪುಸ್ತಕ ವಿತರಣೆ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರರಾದ ಕಿರಣ್ ಮಂಜನಬೈಲು ಅವರಿಗೆ ‘ಯಶೋ ಮಾಧ್ಯಮ-2025’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೆ. ಅನಂತಪದ್ಮನಾಭ ಕಿಣಿ, ಭಾರತ್ ಸ್ಕೌಟ್ ಅಂಡ್ ಗೈಡ್ಸ್ ಉಡುಪಿ ಜಿಲ್ಲಾ ಸಂಸ್ಥೆಯ ಸ್ಕೌಟ್ ಆಯುಕ್ತರಾದ ಜನಾರ್ದನ್ ಕೊಡವೂರು, ಉಡುಪಿ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್‌ನ ನಿಕಟಪೂರ್ವ ಅಧ್ಯಕ್ಷೆ ಡಾ. ರಾಜಲಕ್ಷ್ಮೀ, ಮಣಿಪಾಲ ಕಾಲೇಜ್ ಆಫ್ ನರ್ಸಿಂಗ್‌ನ ಡಾ. ಮರಿಯಾ ಪಾಯಸ್, ಉಡುಪಿಯ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್‌ನ ಹಫೀಜ್ ರೆಹಮಾನ್, ಪ್ರಶಸ್ತಿ ಪುರಸ್ಕೃತರಾದ ಕಿರಣ್ ಮಂಜನಬೈಲು, ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ಸಂಯೋಜಕರಾದ ಸುಬ್ರಹ್ಮಣ್ಯ ಕಾರಂತ್, ಸುಮನ ಎಸ್. ಪೈ, ಸ್ಪಂದನಾ ಸೇವಾ ಸಂಸ್ಥೆಯ ಅಧ್ಯಕ್ಷ ವೆಂಕಟೇಶ್ ಪೈ, ಕಾರ್ಯದರ್ಶಿ ಸಂತೋಷ್ ಕಾಮತ್, ಖಜಾಂಚಿ ರಜನಿ ವಿ. ಪೈ, ಸಹ ಕಾರ್ಯದರ್ಶಿ ಶಿವಾನಂದ ಕಾಮತ್, ಸ್ಪಂದನಾ ವಿ. ಪೈ, ಸಾಧನಾ ಜೋಯಿಶಿ, ಶಾಲೆಯ ಮುಖ್ಯೋಪಾಧ್ಯಾಯ ಸಂತೋಷ್, ಅಧ್ಯಾಪಕ ವೃಂದ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.