
ಉಡುಪಿಗೆ ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ನೇಮಕ
Thursday, June 12, 2025
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಕುತ್ಯಾರು ನವೀನ ಶೆಟ್ಟಿ ಆಯ್ಕೆಯಾಗಿದ್ದಾರೆ.
ದೇಶದಾದ್ಯಂತ ಪಕ್ಷ ಸಂಘಟನಾ ಪರ್ವ ನಡೆಯುತ್ತಿದ್ದು, ಅದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಉಳಿದಿರುವ 10 ಜಿಲ್ಲೆಗಳ ಅಧ್ಯಕ್ಷ ಆಯ್ಕೆ ಪ್ರಕ್ರಿಯೆ ನಡೆಸಲಾಗಿದೆ. ಅದರಂತೆ ಉಡುಪಿ ಜಿಲ್ಲೆಗೆ ನೂತನ ಅಧ್ಯಕ್ಷರನ್ನಾಗಿ ಕುತ್ಯಾರು ನವೀನ್ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘಟನಾ ಪರ್ವ ರಾಜ್ಯ ಚುನಾವಣಾಧಿಕಾರಿ ಕ್ಯಾ.ಗಣೇಶ್ ಕಾರ್ಣಿಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.