
ಪ್ರೊ. ಸೋಜನ್ ಕೆ.ಜಿ. ನೂತನ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕಾರ
Tuesday, June 17, 2025
ಉಡುಪಿ: ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇಲ್ಲಿನ ಪ್ರಾಂಶುಪಾಲರಾದ ಪ್ರೊ. ಶ್ರೀಧರ ಪ್ರಸಾದ್ ಕೆ., ವಯೋ ನಿವೃತ್ತಿಯನ್ನು ಹೊಂದಿದ್ದು, ಕಾಲೇಜಿನ ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥರಾದ ಪ್ರೊ. ಸೋಜನ್ ಕೆ.ಜಿ. ನೂತನ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ರಾಜೇಂದ್ರ ಕೆ., ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಮಂಜುನಾಥ್, ಆಂಗ್ಲ ಭಾಷಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರೇಖಾ, ವಾಣಿಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ. ಉಮೇಶ್ ಮಯ್ಯ ಹಾಗೂ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಪುನೀತ್ ತೆಂಡೂಲ್ಕರ್ ಉಪಸ್ಥಿತರಿದ್ದರು.