
ಅಕ್ರಮ ಮದ್ಯ ಮಾರಾಟ: ವ್ಯಕ್ತಿ ಸೆರೆ
Wednesday, June 11, 2025
ಉಡುಪಿ: ಇಲ್ಲಿನ ಹಳೇ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯ ಆಶಾ ಬಾರ್ ಬಳಿ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೋರ್ವ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದುಕೊಂಡ ಪೊಲೀಸರು ಹಾವೇರಿ ಮೂಲದ ಶಂಭುಲಿಂಗ ಮಡಿವಾಳ (37) ಎಂಬಾತನನ್ನು ದಸ್ತಗಿರಿ ಮಾಡಿದ್ದಾರೆ.
ಆತನಿಂದ 2,600 ರೂ. ಮೌಲ್ಯದ ವಿವಿಧ ಬ್ರಾಂಡ್‌ನ ಮದ್ಯದ ಸಾಚೇಟ್‌ಗಳು ಮತ್ತು ನಗದು 3,960ನ್ನು ವಶಪಡಿಸಿಕೊಳ್ಳಲಾಗಿದೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.