ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್: ದಂಪತಿ ಸೆರೆ

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್: ದಂಪತಿ ಸೆರೆ

ಉಡುಪಿ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಸಂಬಂಧ ದಂಪತಿಯನ್ನು ಉಡುಪಿ ಸೆನ್ ಪೊಲೀಸರು ಜೂ.೩ರಂದು ಇಲ್ಲಿನ ಪೂರ್ಣಪ್ರಜ್ಞ ಕಾಲೇಜು ಸಮೀಪದ ಮನೆಯೊಂದರಿಂದ ಬಂಧಿಸಿದ್ದಾರೆ.

ಅನಂತ ಪಿ. ಹಾಗೂ ಆತನ ಪತ್ನಿ ವಾಣಿಶ್ರೀ ಬಂಧಿತರು. ಅವರಿಂದ ಎರಡು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಪಿಪಿಸಿ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿರುವ ಅವರು ಕ್ರಿಕೆಟ್ ಬೆಟ್ಟಿಂಗ್ ವೈಬ್‌ಸೈಟ್ ಮೂಲಕ ಐಪಿಎಲ್ ಕ್ರಿಕೆಟ್‌ನ ಫೈನಲ್ ಪಂದ್ಯಾಟಕ್ಕೆ ಸಂಬಂಧಿಸಿ ಸಾರ್ವಜನಿಕರಿಂದ ಹಣ ಸಂಗ್ರಹ ಮಾಡಿ ಕ್ರಿಕೆಟ್ ಬೆಟ್ಟಿಂಗ್ ಅಕ್ರಮ ದಂಧೆಯಲ್ಲಿ ತೊಡಗಿಕೊಂಡಿದ್ದರು. ಆ ಬಗ್ಗೆ ದೊರೆತ ಖಚಿತ ಮಾಹಿತಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಅನಂತ ಬೇರೆ ಬೇರೆ ವ್ಯಕ್ತಿಗಳಿಗೆ ಕರೆ ಮಾಡಿ ಅವರವರ ತಂಡವನ್ನು ತಿಳಿಸಿ ಅವರಿಂದ ಹಣ ಸಂಗ್ರಹ ಮಾಡುತ್ತಿದ್ದು, ವಾಟ್ಸಾಪ್ ಚಾಟ್ ಮೂಲಕ ಕ್ರಿಕೆಟ್ ಬೆಟ್ಟಿಂಗ್‌ಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಹಣ ನೀಡುವ ಒಪ್ಪಿಗೆಯ ಮೇರೆಗೆ ಪಂಥ ಸ್ವೀಕರಿಸಿದ್ದ. ಅದನ್ನು ಸಿದ್ದಾರ್ಥ ಎಂಟರ್‌ಪ್ರೈಸಸ್ ಎಂಬ ಸ್ಥಂಸ್ಥೆಯ ಬ್ಯಾಂಕ್ ಖಾತೆ ಹಾಗೂ ಫೋನ್ ಪೇ ಮೂಲಕ ಹಣವನ್ನು ಪಣವಾಗಿಟ್ಟುಕೊಂಡಿದ್ದು, ಕ್ರಿಕೆಟ್ ಬೆಟ್ಟಿಂಗ್ ವ್ಯವಹಾರವನ್ನು ತನ್ನ ಮತ್ತು ಪತ್ನಿಯ ಬ್ಯಾಂಕ್ ಖಾತೆ ಮೂಲಕ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article