
ಕೋಟ್ಪಾ ದಳದಿಂದ ದಾಳಿ: ದಂಡ ವಸೂಲಿ
Tuesday, June 24, 2025
ಉಡುಪಿ: ಕೋಟ್ಟಾ 2003 ಕಾಯ್ದೆ ಅನು?ನಗೊಳಿಸುವ ನಿಟ್ಟಿನಲ್ಲಿ ಉಡುಪಿ ತಾಲೂಕು ತಂಬಾಕು ನಿಯಂತ್ರಣ ದಳ ವತಿಯಿಂದ ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಕರ್ಜೆ, ಪೇತ್ರಿ ಮೊದಲಾದ ಕಡೆಗಳಲ್ಲಿ ತಂಬಾಕು ಮಾರಾಟದ ಅಂಗಡಿಗಳು, ಹೋಟೆಲ್‌ಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ ಕೋಟ್ಟಾ ಕಾಯ್ದೆ ಉಲ್ಲಂಘನೆಯಾದ ಒಟ್ಟು 42 ಪ್ರಕರಣ ದಾಖಲಿಸಿ 6,600 ರೂ. ದಂಡ ವಸೂಲಿ ಮಾಡಲಾಯಿತು. ನಾಮಫಲಕಗಳನ್ನು ವಿತರಿಸಿ, ಆಳವಡಿಸುವಂತೆ ಸೂಚಿಸಲಾಯಿತು.
ಈ ಸಂದರ್ಭದಲ್ಲಿ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಮಹೇಶ್ ಐತಾಳ್, ಕೋಟ ಸ.ಆ.ಕೇಂದ್ರದ ವೈದ್ಯಾಧಿಕಾರಿ ಡಾ.ವಿಶ್ವನಾಥ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಬಸವರಾಜ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಬ್ರಹ್ಮಾವರ ಪೋಲೀಸ್ ಠಾಣೆಯ ಆರಕ್ಷಕರು, ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿಯ ಮಹೇಶ್ ಮೊದಲಾದವರು ಭಾಗವಹಿಸಿದ್ದರು.