
ರಾಜಕೇಸರಿ ಸಂಘಟನೆಯಿಂದ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್, ಬರೆಯುವ ಪುಸ್ತಕ ವಿತರಣೆ
ಉಜಿರೆ: ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಮನೋಜ್ ಕುಮಾರ್ ಕಟ್ಟೆಮಾರ್ ಇವರ ಹುಟ್ಟು ಹಬ್ಬದ ಪ್ರಯುಕ್ತ ಲಾಯಿಲ ಗ್ರಾಮದ ದ.ಕ. ಜಿ.ಪಂ. ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ಬರೆಯುವ ಪುಸ್ತಕವನ್ನು ವಿತರಿಸಲಾಯಿತು.
ಗ್ರಾ.ಪಂ. ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ ಮಾತನಾಡಿ, ಕಳೆದ 13 ವರ್ಷಗಳಿಂದ ದೀಪಕ್ ಜಿ. ಅವರ ನೇತೃತ್ವದ ರಾಜಕೇಸರಿ ಸಂಘಟನೆ ರಕ್ತದಾನ, ಮನೆ ನಿರ್ಮಾಣ ಸೇರಿದಂತೆ ಹಲವಾರು ವಿವಿಧ ರೀತಿಯ ಸೇವಾ ಯೋಜನೆಗಳನ್ನು ಮಾಡುತ್ತಾ ಸಮಾಜದ ಅಶಕ್ತ ಕುಟುಂಬಗಳಿಗೆ ಸಹಾಯ ಹಸ್ತ ಚಾಚುತ್ತಿರುವುದರ ಜತೆಗೆ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ಪುಸ್ತಕ ವಿತರಣೆ ಮಾಡುವಂತಹ ಕೆಲಸವನ್ನು ಮಾಡುತಿದ್ದಾರೆ. ಅವರಿಗೆ ಇನ್ನಷ್ಟು ಸೇವಾ ಕಾರ್ಯಗಳನ್ನು ಮಾಡಲು ದೈವ ದೇವರುಗಳು ಶಕ್ತಿಯನ್ನು ನೀಡಲಿ, ನಾನು ಮಾಡಿದ ಮನವಿಗೆ ಸ್ಪಂದಿಸಿ ಪಡ್ಲಾಡಿ ಶಾಲೆಯ ಎಲ್ಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಬ್ಯಾಗ್ ಮತ್ತು ಪುಸ್ತಕವನ್ನು ರಾಜಕೇಸರಿ ಸಂಘಟನೆಯ ಪೋಷಕರಾದ ಕಟ್ಟೆಮಾರ್ ಮನೋಜ್ ಕುಮಾರ್ ಅವರ ಹುಟ್ಟು ಹಬ್ಬದ ದಿನ ಶಾಲೆಗೆ ತಂದು ನೀಡಿರುವುದು ಸಂತಸ ತಂದಿದೆ. ಅವರಿಗೆ ಶಾಲಾ ಮಕ್ಕಳ ಪರವಾಗಿ ಕೃತಜ್ಞತೆ ಸಲ್ಲಿಸಿದರು.
ರಾಜಕೇಸರಿ ಸಂಸ್ಥಾಪಕ ದೀಪಕ್ ಜಿ. ಮಾತನಾಡಿ, ಮಕ್ಕಳು ಉತ್ತಮ ರೀತಿಯಲ್ಲಿ ಕಲಿತು ಸಮಾಜದಲ್ಲಿ ಗಣ್ಯ ವ್ಯಕ್ತಿಗಳಾಗಿ ಬಾಳಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ರಾಜಕೇಸರಿ ಸಂಘಟನೆಯ ಸಂಪತ್, ಜಗದೀಶ್ ಉಪಸ್ಥಿತರಿದ್ದರು. ಪ್ರಭಾರ ಮುಖ್ಯ ಶಿಕ್ಷಕ ಯೋಗೀಶ್ ಸ್ವಾಗತಿಸಿ, ಸಹ ಶಿಕ್ಷಕ ಮಧು ವಂದಿಸಿದರು. ಶಾಲಾ ಮಕ್ಕಳು ಹುಟ್ಟು ಹಬ್ಬ ಆಚರಿಸುತ್ತಿರುವ ಮನೋಜ್ ಕಟ್ಟೆಮಾರ್ ಅವರಿಗೆ ಶುಭಾಶಯ ಕೋರಿದರು.