
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ
ಉಜಿರೆ: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಗ್ಗಡೆಯವರ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಆದೇಶದಂತೆ, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಜೂ.22 ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ ನಡೆಯಲಿದೆ.
ಜನರಲ್ ಸರ್ಜನ್ ಡಾ. ಬಾಲಾಜಿ ಪ್ರಭಾಕರನ್ MBBS, MS (General Surgery) ಹಾಗೂ ಡಾ. ಕಿರಣ್ ಕುಮಾರ್ MBBS, MS (General Surgery) ತಪಾಸಣೆ ನಡೆಸಲಿದ್ದಾರೆ. ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿದ್ದು, 10% ರಿಯಾಯಿತಿ ದರದಲ್ಲಿ ಔಷಧ, ಒಳರೋಗಿ ವಿಭಾಗದ ಶುಲ್ಕದಲ್ಲಿ 20% ರಿಯಾಯಿತಿ, ಲ್ಯಾಬ್ ಹಾಗೂ ರೇಡಿಯಾಲಜಿ ಪರೀಕ್ಷೆಯಲ್ಲಿ 20% ರಿಯಾಯಿತಿ ದೊರೆಯಲಿದೆ.
ಸಾಮಾನ್ಯ ಶಸ್ತ್ರಚಿಕಿತ್ಸಾ ತಪಾಸಣೆ, ಹರ್ನಿಯಾ (ಕಿಬ್ಬೊಟ್ಟೆ, ತೊಡೆಸಂದು, ಹೊಕ್ಕಳು) ಕಡಿಮೆ ಮಾಡಬಹುದಾದ ಊತ, ಪಿತ್ತಕೋಶದ ಕಲ್ಲುಗಳು, ಕಿಬ್ಬೊಟ್ಟೆಯ ನೋವು, ಕಾಮಾಲೆ, ಅಪೆಂಡಿಸೈಟಿಸ್ (ಕೆಳಗಿನ ಬಲ ಹೊಟ್ಟೆ ನೋವು), ಮೂಲವ್ಯಾದಿ, ಪಿಸ್ತುಲಾ, ವೃಷಣಗಳ ನೋವು ರಹಿತ ಊತ, ಚರ್ಮದ ಗಾಯಗಳು ಮತ್ತು ಗೆಡ್ಡೆಗಳ ತಪಾಸಣೆ ನಡೆಸಲಾಗುವುದು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.