ಫೇಸ್‌ಬುಕ್‌ನಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ಪೋಸ್ಟ್: ಪ್ರಕರಣ ದಾಖಲು

ಫೇಸ್‌ಬುಕ್‌ನಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ಪೋಸ್ಟ್: ಪ್ರಕರಣ ದಾಖಲು

ವಿಟ್ಲ: ಫೇಸ್‌ಬುಕ್ ಖಾತೆಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆಯನ್ನುಂಟು ಮಾಡುವ ಪೋಸ್ಟ್‌ಗಳನ್ನು ಹಾಕಿದ ಆರೋಪದಲ್ಲಿ ಯುವಕನೋರ್ವನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೆರುವಾಯಿ ಗ್ರಾಮದ ನಿವಾಸಿ ಯತೀಶ ಎಂಬಾತನು ಯತೀಶ್ ಪೆರುವಾಯಿ ಎಂಬ ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆಯನ್ನುಂಟು ಮಾಡುವ ರೀತಿಯ 3 ಪೋಸ್ಟ್‌ಗಳನ್ನು ಹಾಕಿದ್ದು, ಅವನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವಿಟ್ಲ ಠಾಣಾ ಪೊಲೀಸರು ತಿಳಿಸಿದ್ದಾರೆ.

ಇಂತಹ ಪೋಸ್ಟ್‌ಗಳಿಂದಾಗಿ ವಿಭಿನ್ನ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಅ.ಕ್ರ: 72/2025 ಕಲಂ: 353(2) BNS 2023ರಂತೆ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article