
ಆರ್ಚಕರ ಮನೆಯಿಂದ ಕಳವು
Saturday, June 21, 2025
ವಿಟ್ಲ: ತಡರಾತ್ರಿ ಆರ್ಚಕರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ವಿಟ್ಲ ಸಮೀಪದ ಉಕ್ಕುಡ ಎಂಬಲ್ಲಿ ಜೂ.20ರಂದು ನಡೆದಿದೆ.
ಅನಂತೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಉಕ್ಕುಡ ನಿವಾಸಿ ರಜತ್ ಭಟ್ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ರಜತ್ ಭಟ್ ತನ್ನ ಹೆಂಡತಿ ಮತ್ತು 2 ಮಕ್ಕಳೊಂದಿಗೆ ವಾಸವಾಗಿದ್ದರು.
ಮನೆಯಲ್ಲಿ ಯಾರೂ ಇಲ್ಲದ ವೇಳೆ ತಡರಾತ್ರಿ ಮನೆಗೆ ನುಗ್ಗಿದ ಖದೀಮರು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಕಳ್ಳರು ಕಿವಿ ಓಲೆ ಮತ್ತು ಸರ ದೋಚಿ ಪರಾರಿಯಾಗಿದ್ದು ಓಟ್ಟು 2 ಪವನ್ ಕಳ್ಳತನವಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.