
ಸ್ಪೀಕರ್ ಮತ್ತು ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮರಳು ಹಾಗೂ ಕೆಂಪುಕಲ್ಲು ಗಣಿಗಾರಿಕೆ ಕುರಿತು ಚರ್ಚೆ
Saturday, July 5, 2025
ಬೆಂಗಳೂರು: ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ಸ್ಪೀಕರ್ ಯು.ಟಿ. ಖಾದರ್ ಹಾಗೂ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಮರಳು ಹಾಗೂ ಕೆಂಪುಕಲ್ಲು ಗಣಿಗಾರಿಕೆ ಕುರಿತಂತೆ ವಿಸ್ತ್ರತವಾದ ಚರ್ಚೆ ನಡೆಸಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮನೆ, ಕಟ್ಟಡ ಕಾಮಗಾರಿಗಳಿಗೆ ಅಡೆತಡೆಯಾಗಿರುವ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಕಾನೂನು ಬದ್ಧವಾಗಿ ಕೆಂಪುಕಲ್ಲು ಹಾಗೂ ಮರಳು ಗಣಿಗಾರಿಕೆಗೆ ಅವಕಾಶ ಕಲ್ಪಿಸಿಕೊಡಲು ಸೂಕ್ತ ಗಣಿ ನೀತಿಯನ್ನ ಜಾರಿಗೆ ತರುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಸಚಿವ ದಿನೇಶ್ ಗುಂಡೂರಾವ್ ಹಾಗೂ ಸ್ಪೀಕರ್ ಯು.ಟಿ ಖಾದರ್ ಅವರು ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಾರದೊಳಗೆ ಗಣಿ ಸಚಿವರೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.