
ಪ್ರಣಬ್ ಮೊಹಂತಿ ನೇತೃತ್ವದಲ್ಲಿ ಎಸ್‌ಐಟಿ ರಚನೆಯಾಗಲಿ
Tuesday, July 15, 2025
ಬೆಂಗಳೂರು: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮ ವ್ಯಾಪ್ತಿಯಲ್ಲಿ ನಡೆದಿರುವ ಹಲವಾರು ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿ ಹೆಣಗಳನ್ನು ಹೂತು ಹಾಕಿರುವುದಾಗಿ ಇತ್ತೀಚೆಗೆ ವ್ಯಕ್ತಿಯೋರ್ವ ಧರ್ಮಸ್ಥಳ ಠಾಣೆಗೆ ನೀಡಿರುವ ದೂರಿನಂತೆ ದಾಖಲಾಗಿರುವ ಪ್ರಕರಣದ ತನಿಖೆಗೆ ಹಿರಿಯ ಐಪಿಎಸ್ ಅಧಿಕಾರಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ಎಸ್‌ಐಟಿ ರಚನೆಯಾಗಲಿ ಎಂದು ದೂರುದಾರನ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ದೇಶಪಾಂಡೆ ಒತ್ತಾಯಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟನೆ ಬಿಡುಗಡೆ ಮಾಡಿರುವ ವಕೀಲರು, ಕರ್ನಾಟಕ ಹೈಕೋರ್ಟ್ ನ ಹಿಂದಿನ ನಿದರ್ಶನದ ಉಲ್ಲೇಖದಂತೆ ಉನ್ನತ ಮಟ್ಟದ ಮತ್ತು ಸಮಗ್ರತೆ ಹೊಂದಿರುವ ಎಸ್‌ಐಟಿ ರಚನೆಯಾಗಬೇಕು ಎಂದು ಆಗ್ರಹಿಸಿದ್ದಾರೆ.