
ರಹೀಂ ಕೊಲೆ: ಮತ್ತೋರ್ವ ಆರೋಪಿಯ ಸೆರೆ
Tuesday, July 1, 2025
ಬಂಟ್ವಾಳ: ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಮೇ.27 ರಂದು ನಡೆದ ಅಬ್ದುಲ್ ರಹಿಮಾನ್ ಕೊಲೆ ಹಾಗೂ ಜೊತೆಗಿದ್ದ ಕಲಂದರ್ ಶಾಫಿ ಎಂಬವರ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಿದ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ತುಂಬೆ ನಿವಾಸಿ ಶಿವಪ್ರಸಾದ್ (33) ಎಂದು ಹೆಸರಿಸಲಾಗಿದೆ. ಈತನನ್ನು ಬಂಟ್ವಾಳ ಸಮೀಪದ ರಾಯಿ ಎಂಬಲ್ಲಿ ದಸ್ತಗಿರಿ ಮಾಡಲಾಗಿದೆ. ಬಂಧಿತ ಆರೋಪಿಯನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಒಟ್ಟು ಸಂಖ್ಯೆ 9ಕ್ಕೇರಿದಂತಾಗಿದೆ.