
ಹೃದಯಾಘಾತ: ಯುವಕ ಮೃತ್ಯು
Thursday, July 10, 2025
ಬಂಟ್ವಾಳ: ರಾಜಸ್ಥಾನ ಮೂಲದ ಅವಿವಾಹಿತ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬಿ.ಸಿ.ರೋಡಿನಲ್ಲಿ ಬುಧವಾರ ರಾತ್ರಿ ನಡೆದಿದೆ.
ರಾಜಸ್ಥಾನ ಮೂಲದ ನಟವರ್ ಸಿಂಗ್ (27) ಮೃತಪಟ್ಟವರು. ಇವರು ಬಿ.ಸಿ.ರೋಡಿನಲ್ಲಿ ಕಳೆದ ಕೆಲವು ವರ್ಷಗಳಿಂದ ಕಾರ್ಯಚರಿಸುತ್ತಿರುವ ನವರತನ್ ಇಲೆಕ್ಟಿಕಲ್ ಅಂಗಡಿಯಲ್ಲಿ ಮ್ಯಾನೇಜರ್ ಆಗಿದ್ದರು. ಆರು ತಿಂಗಳ ಹಿಂದೆ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಯಿಂದ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದಿದ್ದರು.
ಬುಧವಾರ ರಾತ್ರಿ ತಲೆಸುತ್ತು ಬಂದ ಹಿನ್ನೆಲೆಯಲ್ಲಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಆಸ್ಪತ್ರೆ ಮೆಟ್ಟಿಲು ಹತ್ತುವ ಹೊತ್ತಿಗಾಗಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ರಾಜಸ್ಥಾನಕ್ಕೆ ವಿಮಾನದ ಮೂಲಕ ಕಳಿಸಲಾಗಿದೆ.