
ಜನರಲ್ ಸ್ಟೋರ್‌ನಲ್ಲಿ ಅಕ್ರಮ ಮದ್ಯ ದಾಸ್ತಾನು ಪತ್ತೆ
Tuesday, July 8, 2025
ಬಂಟ್ವಾಳ: ತಾಲೂಕಿನ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಎಂಬಲ್ಲಿ ಜನರಲ್ ಸ್ಟೋರೊಂದಕ್ಕೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಅಕ್ರಮವಾಗಿ ಮದ್ಯ ದಾಸ್ತಾನಿರಿಸಿರುವುದನ್ನು ಪತ್ತೆ ಹಚ್ಚಿದ್ದಾರೆ.
ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ, ಅಜ್ಜಿ ಬಾಕಿಮಾರು ‘ಸೂರ್ಯಚಂದ್ರಜನರಲ್ ಸ್ಟೋರ್’ ದಾಳಿ ನಡೆಸಿದ ಪೊಲೀಸರು ಅಲ್ಲಿ ಅಕ್ರಮವಾಗಿರಿಸಲಾಗಿದ್ದ 2.25 ಲೀಟರ್ ಮದ್ಯದ 25 ಸ್ಲಾಚೆಟ್‌ಗಳನ್ನು ವಶಕ್ಕೆ ಪಡಿಸಿಕೊಂಡು ಅಂಗಡಿ ಮಾಲಕಿ ಸುಜಾತಾ ಶೆಟ್ಟಿ ಎಂಬವರ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.