
ಕಾರು-ಲಾರಿ ನಡುವೆ ಅಪಘಾತ: ಚಾಲಕ ಸಾವು
Saturday, July 5, 2025
ಬಂಟ್ವಾಳ: ಕಾರು-ಲಾರಿ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಚಾಲಕ ಮೃತಪಟ್ಟ ಘಟನೆ ತುಂಬೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಪಾವೂರು ನಿವಾಸಿ ನೌಫಾಲ್ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಢಿಕ್ಕಿಯಾಗಿ, ಮೇಲಿಂದ ಹಾರಿ ವಿರುದ್ಧ ರಸ್ತೆ ಮೇಲೆ ಬಿದ್ದಿದ್ದು, ಆ ಸಂದರ್ಭ ಲಾರಿ ಢಿಕ್ಕಿಯಾಗಿದೆ.
ಬಿ.ಸಿ.ರೋಡು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಡಿವೈಡರ್ ಮೇಲೆ ಹತ್ತಿ ಬಳಿಕ ಮಂಗಳೂರು ಕಡೆಯಿಂದ ಬರುವ ರಸ್ತೆ ಮೇಲೆ ಬಿದ್ದಿದೆ. ಈ ಸಂದರ್ಭ ಮಂಗಳೂರು ಕಡೆಯಿಂದ ಬರುತ್ತಿದ್ದ ಕಂಟೈನರ್ ಲಾರಿ ಢಿಕ್ಕಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.