
ಆರೋಪಿಗೆ ನ್ಯಾಯಾಂಗ ಬಂಧನ
ಬಂಟ್ವಾಳ: ತಾಲೂಕಿನ ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ನಡೆದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಖಲಂಧರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪುದು ಗ್ರಾಮ ನಿವಾಸಿ ಪ್ರದೀಪ್(34)ನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಕುಮ್ಡೇಲು ಸ್ಮಶಾನದ ಬಳಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ
ಈಗಾಗಲೇ 9 ಮಂದಿ ಆರೋಪಿಯನ್ನು ಬಂಧಿಸಿದ್ದು, ಇದೀಗ ಬಂಧಿತರ ಸಂಖ್ಯೆ 10 ಕ್ಕೇರಿದೆ. ಇನ್ನಷ್ಟು ಮಂದಿ ಆರೋಪಿಗಳನ್ನು ಗುರುತಿಸಿರುವ ಪೊಲೀಸರು ಶೋಧಕಾರ್ಯ ಮುಂದುವರಿದಿದೆ.
ಪ್ರಕರಣದಲ್ಲಿ ಪೊಲೀಸರು ಈಗಾಗಲೇ ಕೂರಿಯಾಳ ಗ್ರಾಮದ ಮುಂಡರಕೋಡಿ ನಿವಾಸಿ ದೀಪಕ್, ಅಮ್ಮುಂಜೆ ಗ್ರಾಮದ ಶಿವಾಜಿನಗರ ನಿವಾಸಿಗಳಾದ ಪೃಥ್ವಿರಾಜ್, ಚಿಂತನ್, ತೆಂಕಬೆಳ್ಳೂರು ನಿವಾಸಿ ಸುಮಿತ್ ಆಚಾರ್ಯ, ಬಡಗಬೆಳ್ಳೂರು ನಿವಾಸಿ ರವಿರಾಜ್, ತೆಂಕಬೆಳ್ಳೂರು ನಿವಾಸಿ ಅಭಿನ್ ರೈ ಹಾಗೂ ಬಡಗಬೆಳ್ಳೂರು ನಿವಾಸಿ ತೇಜಾಕ್ಷ, ಶೃಂಗೇರಿ ಬೆಟ್ಟಗೆರೆ ಗ್ರಾಮ ನಿವಾಸಿ ರವಿ ಸಂಜಯ್, ತುಂಬೆ ಗ್ರಾಮ ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಪುದು ಗ್ರಾಮದ ನಿವಾಸಿ ಭರತ್ ಕುಮ್ಮೇಲು ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಪೊಲೀಸರು ಜೂ. ೪ರಂದು ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಆತನ ಮನೆಯಲ್ಲಿ ಶೋಧ ಕಾರ್ಯ ನಡೆಸಿದ್ದರು.