
ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ
ಬಂಟ್ವಾಳ: ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಬಿ.ಸಿ.ರೋಡ್ ಮಿನಿ ವಿಧಾನಸೌಧದ ಮುಂಭಾಗ ಬುಧವಾರ ಪ್ರತಿಭಟನೆ ನಡೆಯಿತು
ಪ್ರತಿಭಟನೆಯನ್ನುದ್ದೇಶಿಸಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಮಾತನಾಡಿ ಕಾರ್ಮಿಕರ ಹಕ್ಕುಗಳನ್ನು ದಮನ ಮಾಡಲು ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಿ ಬಂಡವಾಳಶಾಹಿಗಳ ಹಿತ ಕಾಪಾಡಲು ಕೇಂದ್ರ ಸರಕಾರ ಮುಂದಾಗಿದ್ದು, ಇದಕ್ಕೆ ರಾಜ್ಯದ ಕಾಂಗ್ರೆಸ್ ಸರಕಾರ ಕೂಡಾ ಬೆಂಬಲಿಸುತ್ತಿದೆ ಎಂದು ಆರೋಪಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಎ.ಐ.ಸಿ.ಸಿ.ಟಿ.ಯು ಜಿಲ್ಲಾ ಅಧ್ಯಕ್ಷ ರಾಮಣ್ಣ ವಿಟ್ಲ ಮಾತನಾಡಿದರು.
ಎ.ಐ.ಸಿ.ಸಿ.ಟಿ. ರಾಜ್ಯ ಗೌರವಾದ್ಯಕ್ಷರಾದ ಮೋಹನ್ ಕೆ.ಇ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯ ರೈತಸಂಘದ ಜಿಲ್ಲಾ ಕಾರ್ಯದರ್ಶಿ ಕೆ.ಶಾಹುಲ್ ಹಮೀದ್, ಅಕ್ಷರ ದಾಸೋಹ ನೌಕರರ ಸಂಘದ ಮುಖಂಡರಾದ ಜಯಶ್ರೀ, ಎ.ಐ.ಸಿ.ಸಿ.ಟಿ,ಯು ಐ.ಪಿ.ಸಿ.ಎಲ್ ಘಟಕದ ಅದ್ಯಕ್ಷರಾದ ಪ್ರದೀಪ್, ಅಖಿಲ ಭಾರತ ಕಿಸಾನ್ ಮಹಾಸಭಾದ ಜಿಲ್ಲಾ ಅಧ್ಯಕ್ಷರಾದ ಮಹಾವೀರ್ ಜೈನ್ ಪುತ್ತೂರು, ಮುಖಂಡರಾದ ಸಂಜೀವ ಬೆಳ್ತಂಗಡಿ.ಸುಲೈಮಾನ್ ಕೆಲಿಂಜ, ಎ.ಐ.ಸಿ.ಸಿ.ಟಿ.ಯು ರಾಜ್ಯ ಸಮಿತಿ ಸದಸ್ಯರಾದ ಅಶ್ರಫ್ ಕೊಯಿಲ, ಎ.ಐ.ಸಿ.ಸಿ.ಟಿ.ಯು ಜಿಲ್ಲಾ ಮುಖಂಡರಾದ ಭರತ್ ಕುಮಾರ್, ವಿಶ್ವನಾಥ್ , ಸಜೇಶ್ ವಿಟ್ಲ, ಲಿಯಕತ್ ಖಾನ್, ಕಟ್ಟಡ ಕಾರ್ಮಿಕರ ಸಂಘದ ಆನಂದ ಶೆಟ್ಟಿಗಾರ್, ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘಟನೆಯ ಸುಧಾರಾವ್ ಬೆಳ್ತಂಗಡಿ, ಮುಂತಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.