
ಗಂಗೊಳ್ಳಿ: ಅಖಂಡ ಭಜನಾ ಸಪ್ತಾಹಕ್ಕೆ ಚಾಲನೆ
ದೇವಳದ ಪ್ರಧಾನ ಅರ್ಚಕ ಎಸ್.ವೆಂಕಟರಮಣ ಆಚಾರ್ಯ ಮತ್ತು ಪುರೋಹಿತರಾದ ಜಿ. ವಿಠಲದಾಸ ಭಟ್ ಹಾಗೂ ಜಿ.ಅನಂತಕೃಷ್ಣ ಭಟ್ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ಜರಗಿದವು. ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್ ಮತ್ತು ಆಡಳಿತ ಮಂಡಳಿ ಸದಸ್ಯ ಜಿ.ವೆಂಕಟೇಶ ನಾಯಕ್ ಜಂಟಿಯಾಗಿ ದೀಪ ಪ್ರಜ್ವಲನೆ ಮಾಡಿದರು.
ಸಮಾಜದ ಹಿರಿಯರಾದ ಎಂ.ವಿನೋದ ಪೈ, ಜಿ.ನಿತ್ಯಾನಂದ ಶೆಣೈ, ಯು. ನಾರಾಯಣ ಪೈ, ಡಾ. ಕಾಶೀನಾಥ ಪಿ. ಪೈ, ಬಿ. ಕೃಷ್ಣರಾಯ ಪೈ, ಎಂ.ಜಿ. ಮಾಧವ ಪೈ, ಎನ್. ಸುಭಾಶ್ ನಾಯಕ್, ಎಚ್.ಪಾಂಡುರಂಗ ನಾಯಕ್, ಎಂ.ಜಿ. ವಿಶ್ವನಾಥ ಭಂಡಾರ್‌ಕಾರ್, ಪುರೋಹಿತರು, ದೇವಳದ ಆಡಳಿತ ಮಂಡಳಿ ಸದಸ್ಯರು, ಜಿ.ಎಸ್.ಬಿ. ಮಹಿಳಾ ಮಂಡಳಿ ಸದಸ್ಯರು, ಜಿಎಸ್‌ಬಿ ಸಮಾಜಬಾಂಧವರು,ಗ್ರಾಮಸ್ಥರು ಉಪಸ್ಥಿತರಿದ್ದರು.
ಅಖಂಡ ಭಜನಾ ಸಪ್ತಾಹ ಮಹೋತ್ಸವವು ಆಗಸ್ಟ್ 6ರಂದು ದೀಪ ವಿಸರ್ಜನೆಯೊಂದಿಗೆ ಸಮಾಪನಗೊಳ್ಳಲಿದೆ. ಆ.5ರಂದು ಸಂಜೆ 5 ಗಂಟೆಗೆ ನಗರ ಭಜನೆ, ರಾತ್ರಿ ವಿಶೇಷ ಪೂಜೆ ನಡೆಯಲಿದೆ. ಅಖಂಡ ಭಜನಾ ಸಪ್ತಾಹ ಮಹೋತ್ಸವದಲ್ಲಿ ಊರ ಪರ ಊರಿನ ವಿವಿಧ ಭಜನಾ ತಂಡಗಳು ಪಾಲ್ಗೊಂಡು ಭಜನಾ ಸೇವೆ ಸಮರ್ಪಿಸಲಿದ್ದು, ಪ್ರತಿನಿತ್ಯ ಶ್ರೀದೇವರಿಗೆ ವಿಶೇಷ ಪೂಜೆ ಪುನಸ್ಕಾರ, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.