ಇನ್ನಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗ್ಯಾರಂಟಿ ಅದಾಲತ್

ಇನ್ನಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗ್ಯಾರಂಟಿ ಅದಾಲತ್


ಕಾರ್ಕಳ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಥಮ ‘ಗ್ಯಾರಂಟಿ ಅದಾಲತ್’ ಕಾರ್ಯಕ್ರಮವು ಇನ್ನಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯಿತು.

ಇನ್ನಾ ಗ್ರಾಮದ ಮುದ್ದಾಣು ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಪದಾಧಿಕಾರಿಗಳು, ತಾಲೂಕು ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಗ್ಯಾರಂಟಿ ಫಲಾನುಭವಿಗಳ ಕುಂದು ಕೊರತೆಗಳನ್ನು ಆಲಿಸಿದರು ಹಾಗೂ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರವನ್ನು ಸೂಚಿಸಿದರು.

ಅದಾಲತ್‌ನ್ನು ಉದ್ಘಾಟಿಸಿ ಮಾತನಾಡಿದ ಗ್ಯಾರಂಟಿ ಸಮಿತಿಯ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು ಅವರು ಗ್ಯಾರಂಟಿ ಅದಾಲತ್ ನಡೆಸುವುದರಿಂದ ಯೋಜನೆಯ ಅನುಷ್ಠಾನಕ್ಕೆ ಇನ್ನಷ್ಟು ವೇಗ ದೊರಕಿದಂತಾಗುತ್ತದೆ ಎಂದರು.

ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಉಪಾದ್ಯಕ್ಷ ಉದಯ ಶೆಟ್ಟಿ ಮುನಿಯಾಲು ಮಾತನಾಡಿ, ಅಭಿವೃದ್ಧಿ ಎಂದರೆ ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳ ನಿರ್ಮಾಣ ಮುಂತಾದ ಬೌಗೋಳಿಕ ಅಭಿವೃದ್ಧಿ ಮಾತ್ರವಲ್ಲ, ಬೌಗೋಳಿಕ ಅಭಿವೃದ್ಧಿಯ ಜೊತೆಜೊತೆಗೆ ಜನರ ಜೀವನಮಟ್ಟ ಸುಧಾರಣೆಯೂ ಅಭಿವೃದ್ಧಿಯೇ ಆಗಿದೆ, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ರಾಜ್ಯದಲ್ಲಿ ಐತಿಹಾಸಿಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ನಡೆಯಿತು. ಈ ಯೋಜನೆಯಲ್ಲಿ ಪ್ರತೀ ವಿಧಾನಸಭಾ ಕ್ಷೇತ್ರಕ್ಕೂ 250 ಕೋಟಿ ಅನುದಾನವು ಹರಿದು ಬರುತ್ತಿದ್ದು ಇದು ನೇರವಾಗಿ ಜನರ ಕೈ ಸೇರುತ್ತಿದೆ ಎಂದರು.

ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ ಮಾತನಾಡಿ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕಾರ್ಕಳ ತಾಲೂಕಿನಲ್ಲಿ ಅತ್ಯಂತ ಯಶಸ್ವಿಯಾಗಿ ಅನುಷ್ಠಾನವಾಗಿದ್ದು, ಶೇ.96 ಫಲಾನುಭವಿಗಳಿಗೆ ಇದರ ಪ್ರಯೋಜನ ದೊರೆಯುತ್ತಿದೆ ಎಂದ ಅವರು ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಅಂಕಿ ಅಂಶಗಳನ್ನು ದಾಖಲೆ ಸಮೇತವಾಗಿ ಸಭೆಯ ಮುಂದೆ ವಾಚಿಸಿದರು. 

ಇನ್ನಾ ಗ್ರಾಮ ಪಂಚಾಯತ್ ಸದಸ್ಯ ಮತ್ತು ಉಡುಪಿ ಜಿಲ್ಲಾ ಗ್ಯಾರಂಟಿ ಸಮಿತಿಯ ಸದಸ್ಯ ದೀಪಕ್ ಕೋಟ್ಯಾನ್ ಇನ್ನಾ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು ಮಾತೃ ಹೃದಯ, ತಾಯಿ ತನಗೆ ಎಷ್ಟೇ ಕಷ್ಟವಾದರೂ ಮಕ್ಕಳ ಹೊಟ್ಟೆ ತುಂಬಿಸುವ ಕೆಲಸ ಮಾಡುತ್ತಾಳೆ, ಅದೇ ರೀರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಬಡಜನರ ಹೊಟ್ಟೆ ಹಸಿವನ್ನು ನೀಗಿಸುವ ಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆಗಳನ್ನು ನೀಡುವ ಮೂಲಕ ತಾನು ತಾಯಿ ಹೃದಯದ ಮುಖ್ಯಮಂತ್ರಿ ಎಂದು ನಿರೂಪಿಸಿದ್ದಾರೆ ಎಂದರು.

ತಾಲೂಕು ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಪ್ರಶಾಂತ್ ರಾವ್ ಮಾತನಾಡಿ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಇಲಾಖಾ ಮಟ್ಟದಲ್ಲಿ ಶಕ್ತಿಮೀರಿ ಪ್ರಯತ್ನಿಸಲಾಗುವುದು ಎಂದರು. 

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿದ್ಯುತ್ ಇಲಾಖೆ, ಸಾರಿಗೆ ಇಲಾಖೆ, ಯುವನಿಧಿಗೆ ಸಂಬಂದಿಸಿದ ಇಲಾಖೆ ಮತ್ತು ಆಹಾರ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯಲ್ಲಿ ಗ್ಯಾರಂಟಿ ಅನುಷ್ಠಾನದ ವರದಿಗಳನ್ನು ವಾಚಿಸಿದರು. 

ಇನ್ನಾ ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಿತಾ ಶೆಟ್ಟಿ, ಇನ್ನಾ ಮುದ್ದಾಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ದಿವಾಕರ ಶೆಟ್ಟಿ, ಹಾಗೂ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ, ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು, ಗ್ಯಾರಂಟಿ ಫಲಾನುಭವಿಗಳು, ಮಹಿಳೆಯರು ಉಪಸ್ಥಿತರಿದ್ದರು. 

ಇನ್ನಾ ಗ್ರಾಮ ಪಂಚಾಯತ್ ಸದಸ್ಯ ಕುಶ ಆರ್. ಮೂಲ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article