
ಮಾಜಿ ಸಚಿವ, ಶಾಸಕ ಸುನೀಲ್ ಕುಮಾರ್‌ರಿಗೆ ಪಿತ್ರ ವಿಯೋಗ
ಕಾರ್ಕಳ: ಮಾಜಿ ಸಚಿವ, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ತಂದೆ, ಆರ್‌ಎಸ್‌ಎಸ್‌ನ ಹಿರಿಯ ಮುಖಂಡ, ನಿವೃತ್ತ ಪ್ರಾಂಶುಪಾಲ ಎಂ.ಕೆ. ವಾಸುದೇವ (87) ಜು. 17ರ ಮುಂಜಾನೆ ನಿಧನ ಹೊಂದಿದರು.
ಶಾಸಕರ ಮನೆ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಕಲಂಬಾಡಿ ಪದವಿನಲ್ಲಿ ಮೃತರ ಅಂತಿಮ ವಿಧಿ ವಿಧಾನ ನಡೆಯಿತು.
ಆರ್‌ಎಸ್‌ಎಸ್ ಸಂಘದ ಹಿರಿಯ ಪ್ರಚಾರಕರಾದ ದಾ.ಮಾ. ರವಿ, ಸಹ ಪ್ರಾಂತ ಪ್ರಚಾರಕ ನಂದೀಶ್, ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಸಚಿವರಾದ ಸಿ.ಟಿ. ರವಿ, ಪ್ರಮೋದ್ ಮಧ್ವರಾಜ್, ಸಂಸದ ಬ್ರಿಜೇಶ್ ಚೌಟ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ಕಿರಣ್ ಕುಮಾರ್ ಕೊಡ್ಗಿ, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜಪಿ ವಿಭಾಗ ಪ್ರಭಾರಿ ಉದಯ ಶೆಟ್ಟಿ, ಜಿಲ್ಲಾ ಬಿಜೆಪಿ ಪ್ರಮುಖರಾದ ಜಗದೀಶ್ ಅಧಿಕಾರಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್, ಪುರಸಭೆ ಅಧ್ಯಕ್ಷ ಯೋಗೀಶ್ ದೇವಾಡಿಗ, ಮಾಜಿ ಅಧ್ಯಕ್ಷರುಗಳಾದ ರೆಹಮತ್ ಏನ್ ಶೇಖ್, ಪ್ರತಿಮಾ ರಾಣೆ, ನಳಿನಿ ಆಚಾರ್ಯ, ಸದಸ್ಯರುಗಳಾದ ವಿ ವೇಕಾನಂದ ಶೆಣೈ, ವಿನ್ನಿ ಬೋಲ್ಡ್ ಮೆಂಡೋನ್ಸ, ಶುಭದ ರಾವ್, ಪ್ರವೀಣಚಂದ್ರ ಶೆಟ್ಟಿ, ಪ್ರದೀಪ್ ಮಾರಿಗುಡಿ, ಪಲ್ಲವಿ ಪ್ರವೀಣ್, ನೀತಾ ಆಚಾರ್ಯ, ಮಮತ ಪೂಜಾರಿ, ಶಶಿಕಲಾ ಶೆಟ್ಟಿ, ಹರೀಶ್ ದೇವಾಡಿಗ, ಲಕ್ಷ್ಮೀ ನಾರಾಯಣ ಮಲ್ಯ, ರೆಹಮತ್ ಏನ್ ಶೇಖ್, ಮೀನಾಕ್ಷಿ ಗಂಗಾಧರ್, ಭಾರತೀ ಅಮೀನ್, ಹಿರಿಯ ನ್ಯಾಯವಾದಿ ಕಾಂಗ್ರೆಸ್ ಮುಖಂಡ ಶೇಖರ್ ಮಡಿವಾಳ್, ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ, ಸಾಣೂರಿನ ರಾಜೇಶ್ವರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಮುಂಬೈ ಉದ್ಯಮಿ ಶಿವರಾಮ ಶೆಟ್ಟಿ, ವಿವಿಧ ಕ್ಷೇತ್ರದ ಗಣ್ಯರು, ರಾಜಕೀಯ ಮುಖಂಡರು, ಉದ್ಯಮಿಗಳು ಭೇಟಿ ನೀಡಿ ಅಂತಿಮ ದರ್ಶನ ಪಡೆದರು.