ನಿಟ್ಟೆ ಕಾಲೇಜು ವಿದ್ಯಾರ್ಥಿನಿ ರಚನಾ ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

ನಿಟ್ಟೆ ಕಾಲೇಜು ವಿದ್ಯಾರ್ಥಿನಿ ರಚನಾ ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ


ಕಾರ್ಕಳ: ಹೊಸದಿಲ್ಲಿ ಲೆಕ್ಕಪರಿಶೋಧಕರ ಸಂಸ್ಥೆ(ಐಸಿಎಐ) ಮೇ 2025 ರಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಡಾ.ಎನ್.ಎಸ್.ಎ.ಎಮ್. ಪ್ರಥಮದರ್ಜೆ ಕಾಲೇಜಿನ 2017-2020 ನೇ ಸಾಲಿನ ಬಿಕಾಂ ವಿದ್ಯಾರ್ಥಿನಿ ಕುಮಾರಿ ರಚನಾ ಎಸ್.ಡಿ ತೇರ್ಗಡೆಯಾಗಿರುತ್ತಾರೆ. ಇವರು  ಮೂಡಬಿದ್ರೆಯ ಧೀರಜ್ ಎಸ್.ಎಮ್ ಮತ್ತು ಪದ್ಮಜಾ ಶೆಟ್ಟಿಯವರ ಸುಪುತ್ರಿ. ಕುಮಾರಿ ರಚನಾ ಎಸ್.ಡಿ  ಇವರು ಮಂಗಳೂರಿನ ಕೆಎನ್ಡಿಸಿ ಆಂಡ್ ಅಸೋಸಿಯೆಶನ್ ಲ. ಅಲ್ಲಿ ಸಿಎ ಪ್ರಾಯೋಗಿಕ ತರಬೇತಿಯನ್ನು ಪಡೆದಿರುತ್ತಾರೆ.

ಇವರಿಗೆ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್.ವಿನಯ್ ಹೆಗ್ಡೆ, ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಶಾಂತರಾಮ ಶೆಟ್ಟಿ ಮತ್ತು ವಿಶಾಲ್ ಹೆಗ್ಡೆ, ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ಎಂ.ಎಸ್. ಮೂಡಿತ್ತಾಯ ಹಾಗೂ ಕಾಲೇಜಿನ ಪ್ರಾಂಶುಪಾಲೆ ಡಾ.ವೀಣಾ ಕುಮಾರಿ ಬಿ.ಕೆ, ಕಾಲೇಜಿನ ಅಧ್ಯಾಪಕ, ಅಧ್ಯಾಪಕೆತರ ಬಳಗ ಶುಭ ಹಾರೈಸಿ ಅಭಿನಂದನೆಗಳನ್ನು ಸಲ್ಲಿಸಿರುವರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article