
ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್: ನಿವೃತ್ತರ ಬೀಳ್ಕೊಡುಗೆ
Wednesday, July 2, 2025
ಕುಂದಾಪುರ: ಗಂಗೊಳ್ಳಿಯಲ್ಲಿನ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನಲ್ಲಿ ಕಳೆದ 19 ವರ್ಷಗಳಿಂದ ಪ್ರಧಾನ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಜಿ.ದಯಾನಂದ ಗಾಣಿಗ ಅವರನ್ನು ಬ್ಯಾಂಕಿನ ವತಿಯಿಂದ ಬೀಳ್ಕೊಡಲಾಯಿತು.
ಗಂಗೊಳ್ಳಿ ಶ್ರೀ ಶಾರದಾ ಮಂಟಪದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಆನಂದ ಬಿಲ್ಲವ ಅವರು ದಯಾನಂದ ಗಾಣಿಗ ಅವರ ಸೇವೆಯನ್ನು ಶ್ಲಾಘಿಸಿ ಅವರನ್ನು ಸನ್ಮಾನಿಸಿ ಗೌರವಿಸಿದರು.
ಉಪಾಧ್ಯಕ್ಷ ವಾಸುದೇವ ಶೇರುಗಾರ್, ನಿರ್ದೇಶಕರಾದ ಹರೀಶ ಮೇಸ್ತ, ಗೋಪಾಲ ನಾಯ್ಕ್, ನಾಗರಾಜ ಎಂ., ಲಕ್ಷ್ಮಣ, ಯಮುನಾ, ಪ್ರೇಮಾ ಪೂಜಾರಿ, ಚಂದ್ರಮತಿ ಹೆಗ್ಡೆ, ಪ್ರಭಾರ ಪ್ರಧಾನ ವ್ಯವಸ್ಥಾಪಕ ರಾಜಗೋಪಾಲ ಪೂಜಾರಿ, ಆಶಾಲತಾ ಡಿ.ಗಾಣಿಗ, ಪತ್ರಕರ್ತ ಬಿ. ರಾಘವೇಂದ್ರ ಪೈ, ನಿವೃತ್ತ ವ್ಯವಸ್ಥಾಪಕ ಮುತ್ತ ಕುಂದರ್, ಬ್ಯಾಂಕಿನ ಮಾಜಿ ನಿರ್ದೇಶಕರು, ಬ್ಯಾಂಕಿನ ವಿವಿಧ ಶಾಖೆಗಳ ಶಾಖಾ ವ್ಯವಸ್ಥಾಪಕರು, ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.
ಪ್ರಭಾರ ಪ್ರಧಾನ ವ್ಯವಸ್ಥಾಪಕ ರಾಜಗೋಪಾಲ ಪೂಜಾರಿ ಸ್ವಾಗತಿಸಿದರು. ಬ್ಯಾಂಕಿನ ಸಿಬ್ಬಂದಿ ಜಗದೀಶ ಪೂಜಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.