
ಬೀಚ್‌ನಲ್ಲಿ ಭದ್ರತೆ: ಸಮಾಲೋಚನಾ ಸಭೆ
Thursday, July 3, 2025
ಕುಂದಾಪುರ: ತ್ರಾಸಿ-ಮರವಂತೆ ಬೀಚ್‌ನಲ್ಲಿ ಪ್ರವಾಸಿಗರ ಸುರಕ್ಷತೆ ಮತ್ತು ಭದ್ರತೆ ಕುರಿತಂತೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಗಂಗೊಳ್ಳಿ ಕರಾವಳಿ ಪೊಲೀಸ್ ಠಾಣೆ ಮತ್ತು ಉಡುಪಿ ಜಿಲ್ಲೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ತ್ರಾಸಿ-ಮರವಂತೆ ಬೀಚ್‌ನಲ್ಲಿ ಮಂಗಳವಾರ ಚರ್ಚೆ ನಡೆಸಿದರು.
ಗಂಗೊಳ್ಳಿ ಕರಾವಳಿ ಪೊಲೀಸ್ ಠಾಣೆಯ ಇನ್ಪೆಕ್ಟರ್ ವಸಂತ ರಾಮ್ ಆಚಾರ್ ಮಾರ್ಗದರ್ಶನದಲ್ಲಿ ಠಾಣೆಯ ಪಿಎಸ್‌ಐ ಮುಕ್ತಾ ಬಾಯಿ, ಎಎಸ್‌ಐ ಸಂತೋಷ ಕುಂದರ್ ಮತ್ತು ರಾಘವೇಂದ್ರ ದೇವಾಡಿಗ ಅವರು ಪ್ರವಾಸಿಗರ ಸುರಕ್ಷತೆ ಮತ್ತು ಭದ್ರತೆ ಕುರಿತಂತೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಉಡುಪಿ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆ ಅಧಿಕಾರಿ ನಿಧೀಶ್ ಜೊತೆ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ, ಗೃಹ ರಕ್ಷಕ ದಳ, ಪ್ರವಾಸಿ ಮಿತ್ರ ಮತ್ತು ಲೈಪ್ ಗಾರ್ಡ್ಗಳನ್ನು ನಿಯೋಜಿಸುವ ಕುರಿತು ಚರ್ಚೆ ನಡೆಸಲಾಯಿತು.