
10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ವಶಕ್ಕೆ
Sunday, July 13, 2025
ಮಂಗಳೂರು: ಜು.4, 2015 ರಂದು ರಾತ್ರಿ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ, ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಿಹಾರದ ಪಾಟ್ನಾ ನಿವಾಸಿ ಬಬ್ಲೂ ಕುಮಾರ ಎಂಬ ಆರೂಪಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಆತನನ್ನು ವಿಟ್ಲ ಪೊಲೀಸ್ ಠಾಣಾ ಪೊಲೀಸರು, ಬಿಹಾರದ ಪಾಟ್ನಾ ಜಿಲ್ಲೆಯ ಬೀಟಾ ಎಂಬಲ್ಲಿಂದ, ಸ್ಥಳಿಯ ಪೊಲೀಸರ ಸಹಕಾರದಲ್ಲಿ ವಶಕ್ಕೆ ಪಡೆದು, ಜು.13 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.