
ಜು.10 ರಿಂದ ರಾಜ್ಯ ರ‍್ಯಾಂಕಿಂಗ್ ಟೇಬಲ್ ಟೆನ್ನಿಸ್
ಮಂಗಳೂರು: ಕರ್ನಾಟಕ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಹಾಗೂ ದ.ಕ. ಜಿಲ್ಲಾ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ವತಿಯಿಂದ ಕರ್ನಾಟಕ ರಾಜ್ಯ ರ‍್ಯಾಂಕಿಂಗ್ ಟೇಬಲ್ ಟೆನ್ನಿಸ್ ಪಂದ್ಯಾವಳಿ ಜು. 10ರಿಂದ 13ರವರೆಗೆ ಕಂಕನಾಡಿಯ ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.
ಜು. 10ರಂದು ಬೆಳಗ್ಗೆ 11ಕ್ಕೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಪಂದ್ಯಾವಳಿ ಉದ್ಘಾಟಿಸಲಿದ್ದಾರೆ. ಎನ್‌ಎಂಪಿಎ ಚೇರ್ಮೆನ್ ಡಾ. ವೆಂಕಟರಮಣ ಅಕ್ಕರಾಜು ಭಾಗವಹಿಸಲಿದ್ದಾರೆ. ಬಳಿಕ ಅಂಡರ್ 11, 13, 15, 17, 19 ವಿಭಾಗಗಳಲ್ಲಿ ಪುರುಷ ಹಾಗೂ ಮಹಿಳೆಯರ ಪ್ರತ್ಯೇಕ ಪಂದ್ಯಗಳು ನಡೆಯಲಿವೆ. ಶ್ರೇಯಾಂಕ ರಹಿತರಿಗಾಗಿಯೂ ಪ್ರತ್ಯೇಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ದ.ಕ. ಜಿಲ್ಲಾ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಗೌರವಾಧ್ಯಕ್ಷ ಗೌತಮ್ ಶೆಟ್ಟಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕ್ರೀಡಾಕೂಟದಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ರ‍್ಯಾಂಕಿಂಗ್ ಹಾಗೂ ಪದಕ ವಿಜೇತ ಕ್ರೀಡಾಪಟುಗಳು ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಽಸಿರುವವರು ಭಾಗವಹಿಸಲಿದ್ದಾರೆ. ಮಂಗಳೂರಿನ ವಿವಿಧ ಖಾಸಗಿ ಸಂಸ್ಥೆಗಳು, ಶಾಲಾ ಕಾಲೇಜುಗಳಲ್ಲಿ ಟೇಬಲ್ ಟೆನ್ನಿಸ್ ತರಬೇತಿ ನೀಡಲಾಗುತ್ತಿದ್ದು, ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದು, ಉತ್ತಮ ತರಬೇತಿ ಪಡೆಯುತ್ತಿದ್ದಾರೆ. ಇದರಿಂದಾಗಿ ಭಾಗವಹಿಸುವವರ ಸಂಖ್ಯೆಯೂ ಕೂಡ ಅಽಕ ಎಂದರು.
ದ.ಕ. ಜಿಲ್ಲಾ ಟೇಬಲ್ ಟೆನ್ನಿಸ್ ಅಸೋಸಿಯೇಷನ್ ಕಾರ್ಯದರ್ಶಿ ಅಶ್ವಿನ್ ಕುಮಾರ್ ಪಡುಕೋಣೆ ಮಾತನಾಡಿ, ಟೂರ್ನಿಯಲ್ಲಿ 12 ಟೇಬಲ್‌ಗಳನ್ನು ಬಳಸಿಕೊಂಡು ಸ್ಪರ್ಧೆ ಆಯೋಜಿಸಲಾಗಿದ್ದು, ಇದು ರಾಜ್ಯದಲ್ಲೇ ಮೊದಲು. ಹೆಚ್ಚಿನ ಕ್ರೀಡಾಕೂಟದಲ್ಲಿ 5ರಿಂದ 7 ಟೇಬಲ್‌ಗಳನ್ನು ಬಳಸಲಾಗುತ್ತದೆ. ಕಳೆದ ವರ್ಷದ ಟೂರ್ನಿಯಲ್ಲಿ 9 ಟೇಬಲ್‌ಗಳನ್ನು ಬಳಸಲಾಗಿತ್ತು. ಸುಮಾರು 900 ಸ್ಪಽಗಳು ಭಾಗವಹಿಸಿದ್ದರು. ಈ ಬಾರಿ ಸಾವಿರಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಈಗಾಗಲೇ 400 ಕ್ರೀಡಾಪಟುಗಳು ನೋಂದಾಯಿಸಿಕೊಂಡಿದ್ದಾರೆ ಎಂದರು.
ಪ್ರಮುಖರಾದ ಸ್ವರೂಪ್, ಎಲ್ಸನ್ ನೊರೊನ್ಹಾ ಉಪಸ್ಥಿತರಿದ್ದರು.